
ಪ್ರಮುಖ ಸುದ್ದಿ
ಮದ್ದೂರು ತಾಲ್ಲೂಕಿನ ನಗರಕೆರೆ ನಿವೃತ್ತ ಮುಖ್ಯೋಪಾಧ್ಯಾಯ ಎನ್.ಹೆಚ್.ಲಿಂಗಯ್ಯ ನಿಧನ
ರಾಜ್ಯ(ಮಂಡ್ಯ)ಜೂ.30:- ಮದ್ದೂರು ತಾಲ್ಲೂಕಿನ ನಗರಕೆರೆ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದ ಎನ್.ಹೆಚ್.ಲಿಂಗಯ್ಯ (91) ನಿನ್ನೆ ಮಧ್ಯಾಹ್ನ ನಿಧನ ಹೊಂದಿದರು.
ಮೃತರು ಪತ್ನಿ, ನಾಲ್ಕು ಮಂದಿ ಹೆಣ್ಣು ಮಕ್ಕಳು, ಐದು ಮಂದಿ ಗಂಡು ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ನಗರಕೆರೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತರ ಶಿಷ್ಯ, ಮಾಜಿ ಸಚಿವ ಹಾಗೂ ಶಾಸಕರಾದ ಡಿ.ಸಿ.ತಮ್ಮಣ್ಣರವರು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 9008172322 ಸಂಪರ್ಕಿಸಬಹುದು. (ಎಸ್.ಎಚ್)