ಕರ್ನಾಟಕಪ್ರಮುಖ ಸುದ್ದಿ

ಹೋಂ ಕ್ವಾರೆಂಟೈನ್ ಮುಗಿಸಿ ಕರ್ತವ್ಯಕ್ಕೆ ಹಾಜರಾದ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು,ಜೂ.30-ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೋಮ್ ಕ್ವಾರೆಂಟೈನ್ ಮುಗಿಸಿ ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕೋವಿಡ್ ಸಂಬಂಧಿಸಿದ ಸಭೆಗೆ ವಿಧಾನಸೌಧದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆ, ಪತ್ನಿ, ಪುತ್ರಿಗೆ ಕೊರೊನಾ ಪಾಸಿಟಿವ್ ಬಂದಿದ್ದರಿಂದ ನಾನು ಕ್ವಾರಂಟೈನ್‌ನಲ್ಲಿದ್ದೆ. ಎರಡು ಬಾರಿಯ ಟೆಸ್ಟಿಂಗ್ ನಲ್ಲಿ ನನ್ನ ರಿಪೋರ್ಟ್ ನೆಗಟಿವ್ ಬಂತು. ಈಗ ಕ್ವಾರಂಟೈನ್ ಮುಗಿಸಿ ನಾನು ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ. ಎಲ್ಲರ ಆಶೀರ್ವಾದ, ಹಾರೈಕೆಯಿಂದ ನಾನು ಮತ್ತೆ ಬಂದಿದ್ದೇನೆ ಎಂದರು.

ಕಳೆದ ಎಂಟು ದಿನಗಳ ಹಿಂದೆ ಸಚಿವ ಕೆ.ಸುಧಾಕರ್‌ ಅವರ ತಂದೆ, ಪತ್ನಿ, ಪುತ್ರಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಈ ಮೂವರಿಗೂ ಕೊರೊನಾ ಪಾಸಿಟಿವ್‌ ಬಂದಿತ್ತು. ಹೀಗಾಗಿ ಸುಧಾಕರ್‌ ಏಳು ದಿನಗಳ ಕಾಲ ಸದಾಶಿವನಗರದ ತಮ್ಮ ಮನೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದರು.

ಮನೆಯಲ್ಲೇ ಉಳಿದಿದ್ದ ಸಚಿವ ಸುಧಾಕರ್ ವೀಡಿಯೋ ಕಾನ್ಫರೆನ್ಸ್‌ ಮ‌ೂಲಕ ನಿತ್ಯ ತನ್ನ ಇಲಾಖೆಯ ಕಾರ್ಯಗಳ ಬಗ್ಗೆ ಮೇಲುಸ್ತುವಾರಿ ನಡೆಸಿದ್ದರು. ಅಲ್ಲದೆ ಕೊರೊನಾ ತಡೆ ಕುರಿತು ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಕೊರೊನಾ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುತ್ತಿದ್ದರು. (ಎಂ.ಎನ್)

 

Leave a Reply

comments

Related Articles

error: