ಮೈಸೂರು

ಸೇತುವೆಯಿಂದ ಉರುಳಿದ ಬಸ್ : ವಿದ್ಯಾರ್ಥಿಗಳು ಪಾರು

ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ  ಬಸ್ಸೊಂದು ಸೇತುವೆಯಿಂದ ಕೆಳಕ್ಕುರುಳಿದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ನ ಹಳೆ ಮುಖ್ಯ ದ್ವಾರದ ರಸ್ತೆಯಲ್ಲಿ ಖಾಸಗಿ ವಿದ್ಯಾ ಸಂಸ್ಥೆಗೆ ಸೇರಿದ ಬಸ್ಸೊಂದು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು. ಈ ವೇಳೆ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಬಸ್ಸು ಚಾಲಕನ ನಿಯಂತ್ರಣ ಕಳೆದುಕೊಂಡು ಸೇತುವೆಯಿಂದ ಕೇಲಕ್ಕೆ ಉರುಳಿದೆ. ಅದೃಷ್ಟವಾಶಾತ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ. ಬಸ್ಸಿನಲ್ಲಿ ಸುಮಾರು ಆರು ಜನ ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ.

ಕೆಆರ್ ಎಸ್  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

 

Leave a Reply

comments

Related Articles

error: