
ಮೈಸೂರು
ಚಿರತೆ ದಾಳಿಗೆ ಮೇಕೆ ಬಲಿ
ಮೈಸೂರು,ಜು.4:- ಚಿರತೆ ದಾಳಿಗೆ ಮೇಕೆಯೊಂದು ಬಲಿಯಾದ ಘಟನೆ ಹೆಚ್ ಡಿ ಕೋಟೆ ತಾಲೂಕಿನ ನೇರಳೆ ಹೊಸೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮ ಸಿದ್ದರಾಜು ಎಂಬವರಿಗೆ ಸೇರಿದ ಮೇಕೆ ಇದಾಗಿದ್ದು, ಚಿರತೆ ಪದೇ ಪದೇ ಸಾಕುವ ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದೆ. ಚಿರತೆಯ ನಿರಂತರ ದಾಳಿಯಿಂದ ರೈತ ಕುಟುಂಬಗಳು ಕಂಗಾಲಾಗಿದ್ದು, ಚಿರತೆ ಸೆರೆಗೆ ಬೋನು ಇಡುವಂತೆ ಆಗ್ರಹಿಸಿದ್ದಾರೆ. ಬೋನು ಇರಿಸಿ ಚಿರತೆ ಸೆರೆ ಹಿಡಿಯುವಂತೆ ಹಲವು ಬಾರಿ ಕೇಳಿಕೊಂಡರೂ ಅರಣ್ಯ ಇಲಾಖೆ ಸ್ಪಂದಿಸುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದ್ದು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. (ಕೆ.ಎಸ್,ಎಸ್.ಎಚ್)