ಪ್ರಮುಖ ಸುದ್ದಿ

ಬೆಂಗಳೂರಿನ 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳಿವೆ : ಟ್ವೀಟ್ ಮೂಲಕ ಸಚಿವ ಸುಧಾಕರ್ ಮಾಹಿತಿ

ರಾಜ್ಯ( ಬೆಂಗಳೂರು)ಜು.6:- ಬೆಂಗಳೂರಿನ 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳಿವೆ ಎಂದು ಸಚಿವ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರಿಗೆ ಬೆಡ್ ಗಳ ಕೊರತೆ ಎದುರಾಗಿದೆ ಎನ್ನುವ ವದಂತಿಗೆ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿರುವ ಸಚಿವ ಸುಧಾಕರ್ ‘ಬೆಂಗಳೂರು ನಗರದಾದ್ಯಂತ ಇರುವ ಒಟ್ಟು 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಶನಿವಾರ ಸಂಜೆಯ ವೇಳೆಗೆ ಇವುಗಳಲ್ಲಿ 733 ಹಾಸಿಗೆಗಳು ಭರ್ತಿಯಾಗಿದ್ದು 2598 ಹಾಸಿಗೆಗಳು ಅಂದರೆ ಸುಮಾರು ಶೇ.78% ಹಾಸಿಗೆಗಳು ಖಾಲಿಯಿವೆ ಎಂದು ಹೇಳಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಗಳ ತೀವ್ರ ಕೊರತೆ ಎದುರಾಗಿದ್ದು, ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಕೋವಿಡ್-19 ರೋಗಿಗಳು ಮಾತ್ರವಲ್ಲದೇ ಇತರೆ ರೋಗಿಗಳೂ ಕೂಡ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸೋಂಕಿತರಿಗಾಗಿ ಬೆಡ್ ಗಳ ಒದಗಿಸಲು ಸರ್ಕಾರ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಿದೆ. ಅಲ್ಲದೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲೂ ನೂರಾರು ಬೆಡ್ ಗಳ ವಿಶೇಷ ಕೋವಿಡ್ ಸೆಂಟರ್ ವ್ಯವಸ್ಥೆ ಮಾಡಲಾಗುತ್ತಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: