ಮೈಸೂರು

ಕೇಶವಮೂರ್ತಿ ಪರ ಸತೀಶ್ ಜಾರಕಿಹೊಳಿ ಮತಯಾಚನೆ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ದಿನದಿಂದ ಚುನಾವಣಾ ಕಾವು ಏರತೊಡಗಿದೆ. ಘಟಾನುಘಟಿ ನಾಯಕರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ, ಅಭ್ಯರ್ಥಿಗಳ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ. ಸೋಮವಾರ ಸಣ್ಣ ಕೈಗಾರಿಕಾ ಸಚಿವ ಸತೀಶ್ ಜಾರಕಿ ಹೊಳಿ ಕ್ಷೇತ್ರಕ್ಕಾಗಮಿಸಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಪರ ಮತಯಾಚಿಸಿದರು.

ದೇವನೂರು, ಚಿಕ್ಕಕವಲಂದೆ ಸೇರಿದಂತೆ ಹದಿನೈದಕ್ಕೂ ಅಧಿಕ ಗ್ರಾಮಗಳಿಗೆ ತೆರಳಿದ ಸತೀಶ್ ಜಾರಕಿ ಹೊಳಿ ಕಳಲೆ ಕೇಶವ ಮೂರ್ತಿ ಪರ ಮತಯಾಚಿಸಿದರು. ಕಾಂಗ್ರೆಸ್ ನೀಡಿದ ಕೊಡುಗೆಗಳನ್ನು, ಜನಪರ ಕಾರ್ಯಗಳನ್ನು ಜನತೆಯ ಮುಂದಿಟ್ಟರು. ಕೇಶವ ಮೂರ್ತಿಯವರಿಗೆ ತಮ್ಮ ಮತವನ್ನು ನೀಡಿ ಅವರನ್ನು ಗೆಲ್ಲಿಸುವಂತೆ ಅಲ್ಲಿನ ಮತದಾರರಲ್ಲಿ ಮನವಿ ಮಾಡಿದರು. ಈ ಸಂದರ್ಭ ಸಂಸದ ಪ್ರಕಾಶ ಹುಕ್ಕೇರಿ,  ಮಾಜಿ ಗ್ರಾಮಪಂಚಾಯತ್ ಅಧ್ಯಕ್ಷ ಚಂದ್ರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಸವರಾಜು ಸೇರಿದಂತೆ ಹಲವರು ಕಾರ್ಯಕರ್ತರು ಪಾಲ್ಗೊಂಡಿದ್ದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: