ಮೈಸೂರು

ಅಂತಾರಾಷ್ಟ್ರೀಯ ಕಾನೂನುಗಳ ವ್ಯತ್ಯಾಸ ಹಾಗೂ ಅರಿವಿನ ಅಗತ್ಯ ಪ್ರತಿಯೊಬ್ಬರಿಗೂ ಇರಬೇಕು : ಡೇವಿಡ್ ಆಂಬ್ರೋಸ್

ದೇಶ ಹಾಗೂ ಅಂತಾರಾಷ್ಟ್ರೀಯ ಕಾನೂನುಗಳ ವ್ಯತ್ಯಾಸ ಹಾಗೂ ಅರಿವು ಪ್ರತಿಯೊಬ್ಬರಿಗೂ ಇರಬೇಕು ಎಂದು ಮದ್ರಾಸ್ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕ ಡೇವಿಡ್ ಆಂಬ್ರೋಸ್ ಅಭಿಪ್ರಾಯಪಟ್ಟರು.

ಸೋಮವಾರ ಮೈಸೂರು ವಿಶ್ವವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ವತಿಯಿಂದ ಮಾನಸ ಗಂಗೋತ್ರಿಯ ಇಎಂಆರ್‍ಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಡಲ್ ಯುನೈಟೆಡ್ ನೇಷನ್ಸ್ ಸಮ್ಮೇಳನ, ಅಂತಾರಾಷ್ಟ್ರೀಯ ವಿತ್ತೀಯ ವ್ಯವಸ್ಥೆಯ ಸುಧಾರಣೆ, ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಬೌದ್ಧಿಕ ಆಸ್ತಿ ಹಕ್ಕು ನಿಯಂತ್ರಣ ಕುರಿತ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಹಿಂದೆ ಶಿಕ್ಷಣದ ಕೊರತೆಯಿಂದ ಕಾನೂನುಗಳ ಬಗೆಗಿನ ಅರಿವು ಕಡಿಮೆ ಇತ್ತು. ಆದರೆ ಇಂದು ಶಿಕ್ಷಣದ ಮಟ್ಟ ಹೆಚ್ಚಿದ್ದು ಕಾನೂನುಗಳು ಸಹ ಹೆಚ್ಚಾಗಿವೆ. ಅದರಲ್ಲೂ ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕಾನೂನುಗಳು ಹೆಚ್ಚಾಗಿದ್ದು ಅವುಗಳ ಕುರಿತ ಮಾಹಿತಿಯನ್ನು ಎಲ್ಲರೂ ತಿಳಿದುಕೊಳ್ಳಬೇಕು. ಇಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಉಗ್ರಗಾಮಿ ಕೃತ್ಯಗಳು ಹೆಚ್ಚಾಗುತ್ತಿದ್ದು ಅವುಗಳಿಗೆ ಕಡಿವಾಣ ಹಾಕಬೇಕು. ದೇಶದಲ್ಲಿ ಶಾಂತಿ, ಭ್ರಾತೃತ್ವ, ಸಮಾನತೆ ಕಾಪಾಡಲು ಕಾನೂನುಗಳು ಮುಖ್ಯವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಠಿಣ ಕಾನೂನುಗಳ ಅವಶ್ಯಕತೆ ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್.ರಾಜಣ್ಣ, ಕಾನೂನು ಅಧ್ಯಯನ ವಿಭಾಗದ ಪ್ರೊ.ರಮೇಶ್, ಡಾ.ಟಿ.ಆರ್.ಮಾರುತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: