ಕರ್ನಾಟಕಪ್ರಮುಖ ಸುದ್ದಿ

ಕುಣಿಗಲ್ ಶಾಸಕ ಡಾ.ರಂಗನಾಥ್ ಗೆ ಕೊರೊನಾ ಸೋಂಕು

ತುಮಕೂರು,ಜು.6-ಕುಣಿಗಲ್ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಂಗನಾಥ್ ಅವರು ನಿನ್ನೆ ಕೊರೊನಾ ತಪಾಸಣೆಗೆ ಒಳಗಾಗಿದ್ದರು. ಇಂದು ಬಂದ ವರದಿಯಲ್ಲಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸದ್ಯ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಶಾಸಕರು, ಸಾಕಷ್ಟು ಎಚ್ಚರಿಕೆ ವಹಿಸಿದ ಬಳಿಕವೂ ಸೋಂಕು ತಗಲಿದೆ. ಆದ್ದರಿಂದ ಜನರು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ನಾನು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗುತ್ತಿದ್ದೇನೆ. ಕ್ಷೇತ್ರದ ಜನತೆ ನನ್ನ ಬಗ್ಗೆ ಚಿಂತಿಸುವುದು ಬೇಡ. ಕ್ಷೇತ್ರದ ಜನರ ಆರೋಗ್ಯದ ಬಗ್ಗೆ ಜಾಗೃತೆ ವಹಿಸಲಿ. ಯಾವುದೇ ಸಮಸ್ಯೆ ಇದ್ದರೂ ತಮ್ಮ ಗಮನಕ್ಕೆ ತರಬಹುದು. ಕ್ಷೇತ್ರದ ಜನರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ದೂರವಾಣಿ ಸಂಪರ್ಕಕ್ಕೆ ಲಭ್ಯವಿರುತ್ತೇನೆ. ಮುಂದಿನ 15 ದಿನಗಳ ಕಾಲ ಭೇಟಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: