ಮೈಸೂರು

ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ನಿಶ್ಚಿತ : ಮುರಳೀಧರರಾವ್

ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗಳನ್ನು ನೀಡುವ ಮೂಲಕ ಚುನಾವಣಾ ಗಿಮಿಕ್ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಆರೋಪಿಸಿದ್ದಾರೆ.

ಮೈಸೂರು ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಸಾಧನೆಯ ವರದಿ ರಾಜ್ಯವಷ್ಟೇ ಅಲ್ಲ ದೇಶದಲ್ಲೂ ಅತ್ಯದ್ಭುತವಾಗಿದೆ. ದೇಶಾದ್ಯಂತ ದಲಿತರು, ಹಿಂದುಳಿದ ಜನರು ಮೋದಿಯವರ ಆಡಳಿತವನ್ನು ಒಪ್ಪಿಕೊಂಡಿದ್ದಾರೆ. ಇದಕ್ಕೆ ಉತ್ತರ ಪ್ರದೇಶದ ಚುನಾವಣೆಯಲ್ಲಿ ದೊರೆತ ಗೆಲುವೇ ಉತ್ತಮ ಉದಾಹರಣೆಯಾಗಿದೆ ಎಂದರು.

ಜನರು ಮೋದಿಯವರ ಕಾರ್ಯವೈಖರಿಗೆ ಜೈಕಾರ ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಕೇವಲ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ. ಹಿಂದುಳಿದವರ ಅಭಿವೃದ್ಧಿಗಾಗಿ 14ಸಾವಿರ ಕೋಟಿರೂ ಬಿಡುಗಡೆಯಾಗಿದ್ದು, ಕೇವಲ 7ಸಾವಿರ ಕೋಟಿಗಳನ್ನಷ್ಟೇ ಬಳಸಿಕೊಳ್ಳಲಾಗಿದೆ. ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ವಿಫಲಾವಾಗಿದೆ.  ಕಾಂಗ್ರೆಸ್ ನಲ್ಲಿ ಅಧಿಕಾರದಲ್ಲಿರುವ ನಾಯಕರ ಈ ರೀತಿಯ ದುರಾಡಳಿತವನ್ನು ನೋಡಿಯೇ ಕಾಂಗ್ರೆಸ್ ಹಿರಿಯ ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಪಕ್ಷದಲ್ಲಿ ಶ್ರೀನಿವಾಸ್ ಪ್ರಸಾದ್ ಅವರನ್ನು ಪಕ್ಷದ ಹಿರಿಯ ರಾಜಕಾರಣಿ ಅಂತಲೂ ನೋಡದೇ ಕಡೆಗಣಿಸಿದರು. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೊನೆಯ ಚುನಾವಣೆಯಾಗಿದೆ. ಇನ್ನು ಮುಂದೆ ಯಾವತ್ತೂ ಅವರು ಅಧಿಕಾರಕ್ಕೆ ಬರಲಾರರು. ಜನತೆ ಅವರ ಆಡಳಿತದಿಂದ ಬೇಸತ್ತು ಹೋಗಿದ್ದಾರೆ ಎಂದು ತಿಳಿಸಿದರು. ಎರಡೂ ಕ್ಷೇತ್ರಗಳಲ್ಲೂ ಬಿಜೆಪಿಯೇ ಜಯಭೇರಿ ಬಾರಿಸಲಿದ್ದು, ಕಾಂಗ್ರೆಸ್ ತನ್ನ ನೆಲೆಯನ್ನು ಕಳೆದುಕೊಳ್ಳಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸೋಂಣ್ಣ, ಹೆಚ್.ವಿ.ರಾಜೀವ್, ಬಿಜೆಪಿ ನಗರಾಧ್ಯಕ್ಷ ಡಾ. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: