ಮೈಸೂರು

ಎಸ್ ಎಸ್ ಎಲ್ ಸಿ ಮೌಲ್ಯಮಾಪನ : ನಿಷೇಧಾಜ್ಞೆ

ಮೈಸೂರು,ಜು.7:- ಇಂದಿನಿಂದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ನಡೆಯಲಿದ್ದು, ಮೌಲ್ಯಮಾಪನ ನಡೆಯಲಿರುವ 6ಕೇಂದ್ರಗಳ ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6ರಿಂದ ಸಂಜೆ 6ಗಂಟೆಯವರೆಗೆ ನಿಷೇಧಾಜ್ಞೆ ಘೋಷಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ಕುವೆಂಪುನಗರದ ಜ್ಞಾನಗಂಗಾ ಪ್ರೌಢಶಾಲೆ, ಜಯಲಕ್ಷ್ಮಿಪುರಂನ ಚಿನ್ಮಯ ಪ್ರೌಢಶಾಲೆ, ನಾರಾಯಣ ಶಾಸ್ತ್ರೀ ರಸ್ತೆಯ ಸದ್ವಿದ್ಯಾ ಪ್ರೌಢಶಾಲೆ, ಸರಸ್ವತಿಪುರಂನ ವಿಜಯ ವಿಠ್ಠಲ ಪ್ರೌಢಶಾಲೆ ಹಾಗೂ ವಿವಿ ಮೊಹಲ್ಲಾದ ಸೆಂಟ್ ಫಿಲೋಮಿನಾ ಪ್ರೌಢಶಾಲೆಯಲ್ಲಿ ಮೌಲ್ಯಮಾಪನ ನಡೆಯಲಿದೆ.

ಕಲಂ 35ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿರುವುದಾಗಿ ಅವರು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: