ಮೈಸೂರು

ರಾಜಧಾನಿ ಬೆಂಗಳೂರನ್ನು ಲಾಕ್ ಡೌನ್ ಮಾಡಬೇಕು : ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಜು.7:-  ರಾಜಧಾನಿ ಬೆಂಗಳೂರನ್ನು ಲಾಕ್ ಡೌನ್ ಮಾಡಬೇಕು.  ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.  ಮುಂದಿನ ದಿನಗಳಲ್ಲಿ ಕೊರೋನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುವುದಿಲ್ಲ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಮಾಧ್ಯಮಗಳಿಗೆ ಇಂದು ಪ್ರತಿಕ್ರಿಯಿಸಿ  ಈಗಾಗಲೇ ರಾಜಧಾನಿಯಿಂದ ಗ್ರಾಮೀಣ ಭಾಗಕ್ಕೆ ಜನರು ವಲಸೆ ಹೋಗುತ್ತಿದ್ದಾರೆ.  ನನ್ನ ವರುಣ ಕ್ಷೇತ್ರದಲ್ಲೂ ನಾಲ್ಕು ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.  ಅಧಿಕಾರಿಗಳ ಜೊತೆ ಸಭೆ ನಡೆಸಿ  ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ.  ಬೆಂಗಳೂರನ್ನು ಕನಿಷ್ಠ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಬೇಕು ಎಂದು  ರಾಜ್ಯ ಸರ್ಕಾರಕ್ಕೆ   ಮನವಿ ಮಾಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: