ಪ್ರಮುಖ ಸುದ್ದಿ

ಕೊಡಗಿನಲ್ಲಿ ಮುಂದುವರಿದ ಮಳೆ : ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

ರಾಜ್ಯ( ಮಡಿಕೇರಿ) ಜು.9 :- ಕೊಡಗು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಬೆಟ್ಟಗುಡ್ಡ ಪ್ರದೇಶಗಳಲ್ಲಿ ಆತಂಕದ ವಾತಾವರಣವಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳಿಗೆ ಜಿಲ್ಲಾಡಳಿತ ಸೂಚಿಸಿದೆ.
ಭಾಗಮಂಡಲದಲ್ಲಿ ಸುರಿದ ಧಾರಾಕಾರ ಮಳೆಗೆ ಭಾಗಮಂಡಲ-ತಲಕಾವೇರಿ ಮಾರ್ಗದ ಚೇರಂಗಾಲ ಬಳಿ ಭೂಕುಸಿತ ಉಂಟಾಗಿದ್ದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಭೇಟಿ ನೀಡಿ ಪರಿಶೀಲಿಸಿದರು.
ಭಾಗಮಂಡಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ನಿಭಾಯಿಸಲು ಮುಂಜಾಗ್ರತಾ ಕ್ರಮವಾಗಿ ಭಾಗಮಂಡಲದಲ್ಲಿ ಹೋಂ ಗಾಡ್ರ್ಸ್‍ಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಭೂಕುಸಿತ ಉಂಟಾದ ಪ್ರದೇಶದ ಬಳಿ ವಾಸಿಸುವವರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಈಗಾಗಲೇ ಪರಿಹಾರ ಕಾರ್ಯಾಚರಣೆ ತಂಡ, ಲೋಕೋಪಯೋಗಿ ಇಲಾಖೆ ಮತ್ತು ಸ್ಥಳೀಯ ಪಂಚಾಯತ್ ಅಧಿಕಾರಿಗಳ ನೇತೃತ್ವದಲ್ಲಿ ಮಣ್ಣು ತೆರವುಗೊಳಿಸಿದ್ದು, ಸಾರಿಗೆ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಎನ್‍ಡಿಆರ್‍ಎಫ್ ತಂಡ ಕಾರ್ಯಾಚರಣೆಗೆ ಸಹಕಾರ ನೀಡಿತು.
ಕೊಡಗಿನ ಮಳೆ ವಿವರ
ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 37.77 ಮಿ.ಮೀ. ಕಳೆದ ವರ್ಷ ಇದೇ ದಿನ 27.26 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 551.01 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 461.70 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 51.95 ಮಿ.ಮೀ. ಕಳೆದ ವರ್ಷ ಇದೇ ದಿನ 25.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 864.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 568.49 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 32 ಮಿ.ಮೀ. ಕಳೆದ ವರ್ಷ ಇದೇ ದಿನ 39 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 459.76 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 541.81 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 29.37 ಮಿ.ಮೀ. ಕಳೆದ ವರ್ಷ ಇದೇ ದಿನ 17.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 328.79 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 274.80 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 15.80, ನಾಪೋಕ್ಲು 43, ಸಂಪಾಜೆ 49, ಭಾಗಮಂಡಲ 100, ವಿರಾಜಪೇಟೆ ಕಸಬಾ 30, ಹುದಿಕೇರಿ 58.80, ಶ್ರೀಮಂಗಲ 41, ಪೊನ್ನಂಪೇಟೆ 28.20, ಅಮ್ಮತ್ತಿ 14, ಬಾಳೆಲೆ 20, ಸೋಮವಾರಪೇಟೆ ಕಸಬಾ 21, ಶನಿವಾರಸಂತೆ 24.20, ಶಾಂತಳ್ಳಿ 87.20, ಕೊಡ್ಲಿಪೇಟೆ 35, ಕುಶಾಲನಗರ 3.60, ಸುಂಟಿಕೊಪ್ಪ 5.20 ಮಿ.ಮೀ.ಮಳೆಯಾಗಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: