ಪ್ರಮುಖ ಸುದ್ದಿ

ಜುಲೈ 20ರ ಸುಮಾರಿಗೆ ದ್ವಿತೀಯ ಪಿಯುಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ರಾಜ್ಯ(ಬೆಂಗಳೂರು)ಜು.9:- ಜುಲೈ 20ರ ಸುಮಾರಿಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಸುರೇಶ್ ಕುಮಾರ್ , ಬಹಳ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2 ನೇ ಪಿಯುಸಿ ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ. ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಕಳೆದ ಮಾರ್ಚ್ 4ರಿಂದ 21ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಕೊರೋನಾ ಲಾಕ್‍ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಇಂಗ್ಲಿಷ್ ಪರೀಕ್ಷೆ ಮುಂದೂಡಿಕೆಯಾಗಿತ್ತು. ಈ ಪರೀಕ್ಷೆಯನ್ನು ಜೂ.18ರಂದು ನಡೆಸಲಾಗಿತ್ತು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: