ಪ್ರಮುಖ ಸುದ್ದಿ

ಸಿಎಂ ಗೃಹ ಕಚೇರಿ ಕೃಷ್ಣಾ ಹಾಗೂ ಕಾವೇರಿ ನಿವಾಸಕ್ಕೆ ಕಾಲಿಟ್ಟ ಕೊರೋನಾ : ಸೆಲ್ಫ್ ಹೋಂ ಕ್ವಾರಂಟೈನ್ ನಲ್ಲಿ ಸಿಎಂ ಬಿಎಸ್ ವೈ

ರಾಜ್ಯ(ಬೆಂಗಳೂರು)ಜು.10:- ಸಿಎಂ ಗೃಹ ಕಚೇರಿ ಕೃಷ್ಣಾ ಹಾಗೂ ಕಾವೇರಿ ನಿವಾಸಕ್ಕೆ ಮಹಾಮಾರಿ ಕೊರೋನಾ ಕಾಲಿಟ್ಟಿದ್ದು ಅಲ್ಲಿನ ಸಿಬ್ಬಂದಿಗೆ ಸೋಂಕು ಇರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಐದು ದಿನಗಳ ಕಾಲ ಸೆಲ್ಫ್ ಹೋಂ ಕ್ವಾರಂಟೈನ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾವೇರಿ ನಿವಾಸದ ಸಿಬ್ಬಂದಿಗೆ ಕೊರೋನಾ ಸೋಂಕು ಹಿನ್ನೆಲೆ ಸೆಲ್ಫ್ ಹೋಂ ಕ್ವಾರಂಟೈನ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಉಳಿಯಲಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರು ಸಿಎಂ ಭೇಟಿಗೆ ಅವಕಾಶ ಇರುವುದಿಲ್ಲ. ಸಿಎಂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಬುಧವಾರದವರೆಗೆ ಸಿಎಂ ಬಿಎಸ್ ವೈ ಸೆಲ್ಫ್ ಹೋಂ ಕ್ವಾರಂಟೈನ್ ನಲ್ಲಿದ್ದು ಬುಧವಾರದ ನಂತರ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: