ಕರ್ನಾಟಕಪ್ರಮುಖ ಸುದ್ದಿ

ಆತಂಕ ಪಡುವ ಅಗತ್ಯವಿಲ್ಲ, ಆರೋಗ್ಯವಾಗಿದ್ದೇನೆಂದ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಜು.10-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಯಾರೂ ಆತಂಕ ಪಡುವ ಅಗತ್ಯವಿಲ್ಲ, ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾ, ಕಾವೇರಿ ನಿವಾಸ, ಖಾಸಗಿ ನಿವಾಸ ಧವಳಗಿರಿ ಸೇರಿ ಒಟ್ಟು 10 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಬಿಎಸ್ವೈ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಯಾರೂ ಆತಂಕ ಪಡುವ ಅಗತ್ಯವಿಲ್ಲ, ನಾನು ಆರೋಗ್ಯವಾಗಿ ಇದ್ದೇನೆ. ಎಲ್ಲರೂ ಕರೊನಾದಿಂದ ದೂರವಿರಲು ಮುನ್ನೆಚ್ಚರಿಕೆಯ ಕ್ರಮ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಕೋರಿದ್ದಾರೆ.

ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾವನ್ನು ಸ್ಯಾನಿಟೈಸ್​ ಮಾಡಲಾಗಿದೆ. ಇಂದಿನಿಂದ ಕೆಲ ದಿನಗಳ ಕಾಲ ಗೃಹ ಕಚೇರಿ ಬದಲು ತಮ್ಮ ನಿವಾಸದಿಂದಲೇ ಕರ್ತವ್ಯ ನಿರ್ವಹಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಅಲ್ಲಿಂದಲೇ ವೀಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನೂ ನೀಡಲಿದ್ದಾರೆ.

ಇನ್ನು ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು, ಸಿಎಂ ಗೃಹ ಕಚೇರಿ ಕೃಷ್ಣಾ ಮತ್ತು ಕಾವೇರಿ ನಿವಾಸದಲ್ಲಿ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಬಿಬಿಎಂಪಿ ಸಿಬ್ಬಂದಿ ಸ್ಯಾನಿಟೈಸರ್ ಸಿಂಪಡಿಸಿದ್ದಾರೆ. ಕೆಲ ದಿನಗಳ ಕಾಲ ಮನೆಯಿಂದಲೇ ಸಿಎಂ ಕಾರ್ಯ ನಿರ್ವಹಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆಗಳನ್ನು ಪಾಲಿಸುತ್ತೇವೆ ಎಂದಿದ್ದಾರೆ.

ಸಿಎಂ ಗನ್ ಮ್ಯಾನ್, ಸಿಎಂ ಸ್ಪೇರ್ ವಾಹನದ ಚಾಲಕ, ಅಡುಗೆ ಸಿಬ್ಬಂದಿ, ಎಲೆಕ್ಟ್ರಿಕ್ ಆಪರೇಟರ್, ಸ್ವಚ್ಛತಾ ಸಿಬ್ಬಂದಿ ಸೇರಿ ಒಟ್ಟು 10 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದ ಇವರ ನಿಕಟ ಸಂಪರ್ಕಿಗಳ ಜತೆಗೆ ಸಿಎಂ ಮತ್ತು ರಾಜಕೀಯ ಮುಖಂಡರಲ್ಲೂ ಸೋಂಕಿನ ಭೀತಿ ಆವರಿಸಿದೆ. (ಎಂ.ಎನ್)

Leave a Reply

comments

Related Articles

error: