ಮೈಸೂರು

ಶಾಂತಿಯುತವಾಗಿ ಚುನಾವಣೆ ನಡೆಸಲು ರವಿ.ಡಿ.ಚನ್ನಣ್ಣವರಿಂದ ಮಾರ್ಗದರ್ಶನ

ನಂಜನಗೂಡು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ.  ಎಲ್ಲಾ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ  ಕಾರ್ಯದಲ್ಲಿ ತೊಡಗಿದ್ದಾರೆ.ಚುನಾವಣಾ ಕಾರ್ಯವನ್ನು ಶಾಂತಿಯುತವಾಗಿ ನಡೆಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್ ಮಾರ್ಗದರ್ಶನ ನೀಡಿದರು.

ಶಾಂತಿಯುತವಾಗಿ ಚುನಾವಣೆ ನಡೆಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಪೊಲೀಸ್ ಅಧಿಕಾರಿಗಳಿಗೆ ಪೊಲೀಸ್ ವರಿಷ್ಠಾಧಿಕಾರಿಗಳಾದ ರವಿ. ಡಿ. ಚನ್ನಣ್ಣನವರ್ ಸೋಮವಾರ ನಂಜನಗೂಡಿನಲ್ಲಿ ಮಾರ್ಗದರ್ಶನ ನೀಡಿದರು. ಜಿಲ್ಲಾ ಚುನಾವಣಾಧಿಕಾರಿಗಳಾದ ಡಿ. ರಂದೀಪ್, ಚುನಾವಣಾಧಿಕಾರಿ ಜಿ. ಜಗದೀಶ್ ಅವರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: