ಪ್ರಮುಖ ಸುದ್ದಿ

ಬಾಲಿವುಡ್  ಬಿಗ್ ಬಿ ನಟ ಅಮಿತಾಬ್ ಬಚ್ಚನ್ ಮತ್ತವರ ಪುತ್ರ ನಟ ಅಭಿಷೇಕ್ ಬಚ್ಚನ್ ಗೆ ಕೊರೋನಾ ದೃಢ ; ನಿವಾಸ ಕಂಟೈನ್ಮೆಂಟ್ ಝೋನ್ ಘೋಷಣೆ

ದೇಶ(ಮುಂಬೈ)ಜು.12:-  ಬಾಲಿವುಡ್  ಬಿಗ್ ಬಿ ನಟ ಅಮಿತಾಬ್ ಬಚ್ಚನ್ ಮತ್ತವರ ಪುತ್ರ ನಟ ಅಭಿಷೇಕ್ ಬಚ್ಚನ್ ಗೆ ಕೊರೋನಾ ವೈರಸ್ ಸೋಂಕಿರುವುದು ದೃಢಪಟ್ಟಿದೆ. ಅವರಿರುವ ನಿವಾಸವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ.

ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್‌ಗೆ ಕೊರೋನಾ ವೈರಸ್ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾನುವಾರ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೊರೇಶನ್ ಅಧಿಕಾರಿಗಳು ಅಮಿತಾಬ್ ಬಚ್ಚನ್ ನಿವಾಸವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿ, ಫಲಕವನ್ನು ಹಾಕಿದ್ದಾರೆ. ಮನೆಗೆ ಯಾರೂ ಸಹ ಪ್ರವೇಶ ಮಾಡುವಂತಿಲ್ಲ.

ಪಾಲಿಕೆ ಸಿಬ್ಬಂದಿ ಮನೆಯನ್ನು ಸ್ಯಾನಿಟೈಸ್ ಮಾಡಲು ಆಗಮಿಸಿದ್ದಾರೆ. ಶನಿವಾರ ರಾತ್ರಿ ಅಮಿತಾನ್ ಬಚ್ಚನ್‌ರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿತ್ತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: