ಮೈಸೂರು

ಕೋವಿಡ್-19 ಸೋಂಕು ರೋಗದ ಭೀತಿಯ ಹಿನ್ನೆಲೆ : ಶ್ರೀ ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು,ಜು.13:-  ಕೋವಿಡ್-19 ಸೋಂಕು ರೋಗದ ಭೀತಿಯ ಹಿನ್ನೆಲೆಯಲ್ಲಿ ತಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಭಕ್ತಾದಿಗಳು ಹಾಗೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಜಿಲ್ಲೆ ಸೇರಿದಂತೆ ತಾಲೂಕಿನಾದ್ಯಂತ ಕೊರೋನಾ ವೈರಾಣು ರೋಗ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ತಾಲೂಕಿನ ಮೂಗೂರು ಗ್ರಾಮದಲ್ಲಿ ಈಗಾಗಲೇ ಸ್ವಯಂಘೋಷಿತ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶ್ರೀ ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಭಕ್ತರು ಹಾಗೂ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ತಾಲೂಕು ಸೇರಿದಂತೆ ನೆರೆಯ ಹಲವು ಜಿಲ್ಲೆಗಳಲ್ಲಿ ಶ್ರೀ ತ್ರಿಪುರ ಸುಂದರಿ ಅಮ್ಮನವರ ಲಕ್ಷಾಂತರ ಭಕ್ತರು ಇದ್ದಾರೆ. ಪ್ರತಿನಿತ್ಯವೂ ನೂರಾರು ಸಂಖ್ಯೆಯಲ್ಲಿ ಅಮ್ಮನವರ ದರ್ಶನಕ್ಕೆ ನೆರೆ ಜಿಲ್ಲೆಗಳಿಂದ ಭಕ್ತರು ಬರುತ್ತಿದ್ದಾರೆ. ಬಂದವರ ಆರೋಗ್ಯ ಪರೀಕ್ಷಿಸುವ ಸೌಲಭ್ಯ ದೇವಾಲಯದಲ್ಲಿ ಇಲ್ಲದಿರುವುದರಿಂದ ಸದ್ಯದ ಮಟ್ಟಿಗೆ ದೇವಾಲಯಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು,ಮುಂಜಾನೆ ಹಾಗೂ ಸಂಜೆ ಧಾರ್ಮಿಕ ಕೆರೆಗಳನ್ನು ಅರ್ಚಕರು ನೆರವೇರಿಸಿದ ಬಳಿಕ ದೇವಾಲಯದ ಪ್ರವೇಶದ್ವಾರವನ್ನು ಮಾಡಲಾಗುತ್ತದೆ ಎಂದು ಎಂ.ಬಿ.ಸಾಗರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: