ಮೈಸೂರು

ಕೋವಿಡ್-19 ಕಾಲಾವಧಿಯ ಸಂಕಷ್ಟ ಪರಿಹಾರ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜು.13:- ಕೋವಿಡ್-19 ಕಾಲಾವಧಿಯ ಸಂಕಷ್ಟ ಪರಿಹಾರ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿಗಳ ಕಛೇರಿ ಎದುರಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಕೋವಿಡ್-19  ಲಾಕ್ ಡೌನ್ ನಿಂದಾಗಿ ಇಡೀ ರಾಜ್ಯದ ಜನತೆ ಮನೆಯಲ್ಲಿರುವಂತಾಗಿದೆ. ಐಸಿಡಿಎಸ್ ಯೋಜನೆಗೆ ಅನುದಾನವನ್ನು ಹೆಚ್ಚಳ ಮಾಡಿ ದೇಶದ ಮಕ್ಕಳ ಮತ್ತು ಮಹಿಳೆಯರನ್ನು ಕಾಪಾಡಿ. ಅಂಗನವಾಡಿ ಕೇಂದ್ರಗಳಿಗೆ ಮತ್ತು ಅಂಗನವಾಡಿ ನೌಕರರಿಗೆ ಕೊರೋನಾ ಸಂರಕ್ಷಣೆಯನ್ನು ಒದಗಿಸಿ ಒಳ್ಳೆಯ ಗುಣಮಟ್ಟದ ಸ್ಯಾನಿಟೈಸರ್, ಮಾಸ್ಕ್, ಪಿಪಿಇ ಕಿಟ್ ಗಳನ್ನು ಒದಗಿಸಿ, ಮಕ್ಕಳ ಮಾಸಿಕ ತಪಾಸಣೆ ಮತ್ತು ತೂಕಮಾಡುವಾಗ ಅಂಗನವಾಡಿ ಕೇಂದ್ರಗಳನ್ನು ಮತ್ತು ತೂಕದ ಯಂತ್ರಗಳನ್ನು ಸ್ಯಾನಿಟೈಸ್ ಮಾಡಿಸಿ, ಕೊರೋನಾ ಸಂದರ್ಭದಲ್ಲಿ ದುಡಿಯುತ್ತಿರುವ ಅಂಗನವಾಡಿ ನೌಕರರಿಗೆ 25ಸಾವಿರ ಪ್ರೋತ್ಸಾಹ ಧನ ಮತ್ತು ಸ್ಥಳೀಯ ಸಾರಿಗೆ ಬಸ್ ಪಾಸ್ ಮತ್ತು ಊಟದ ವೆಚ್ಚವನ್ನು ಭರಿಸಿ, ಈಗಿರುವ ಎನ್ ಪಿ ಎಸ್ ಲೈಟ್  ನ್ನು ಬದಲಿಸಿ ಎಲ್ ಐ ಸಿ ಆಧಾರಿತ ನಿವೃತ್ತಿ ವೇತನ ನೀಡಬೇಕು. ಮೇಲ್ವಿಚಾರಕಿಯರ ಹುದ್ದೆಗೆ 100% ಮ ಮೀಸಲಾತಿ ಮತ್ತು ಸೇವಾ ಹಿರಿತನದ ಆಧಾರದಲ್ಲಿ ಅಂಗನವಾಡಿ ನೌಕರರಿಗೆ ಮುಂಬಡ್ತಿ ನೀಡಿ, ಮುಂಹಗಡವಾಗಿ ಮೊಟ್ಟೆ ಬಿಲ್, ತಿಂಗಳಿಗೆ ಸರಿಯಾದ ಬಾಡಿಗೆ, ಗ್ಯಾಸ್, ಗೌರವಧನವನ್ನು ಪಾವತಿಸಬೇಕು ಎಂಬಿತ್ಯಾದಿ ಬೇಡಿಕೆಗಳಿಗೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುನಂದ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಕಾವೇರಮ್ಮ, ಖಜಾಂಚಿ ಧರ್ಮಾವತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: