ಮೈಸೂರು

ಮೈಸೂರು ಜಿಲ್ಲೆಯಲ್ಲಿಂದು 151 ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆ : ಸಾವಿನ ಸಂಖ್ಯೆ 37ಕ್ಕೇರಿಕೆ

ಮೈಸೂರು,ಜು.13:- ಮೈಸೂರು ಜಿಲ್ಲೆಯಲ್ಲಿಂದು ಕೊರೋನಾ ವೈರಸ್ ಸೆಂಚುರಿ ಬಾರಿಸಿದೆ. 151 ಕೊರೋನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇಂದು ಒಂದೇ ದಿನ ಒಂದೂವರೆ ಶತಕ ಬಾರಿಸಿದ್ದು, ಮೈಸೂರಿನಲ್ಲಿ ಕೊರೋನಾ‌ ವೈರಸ್ ಸೋಂಕಿತ ಪಾಸಿಟಿವ್ ಪ್ರಕರಣಗಳ ಸಂಖ್ಯೆ 966 ಕ್ಕೇರಿಕೆ. ಮೈಸೂರಿನಲ್ಲಿ  ಕೊರೋನಾ ವೈರಸ್ ಸೋಂಕಿತರ ಸಂಖ್ಯೆ  900 ರ ಗಡಿ ದಾಟಿ ಸಾವಿರದತ್ತ ಮುನ್ನುಗ್ಗಿದೆ.  ಮೈಸೂರಿನಲ್ಲಿಂದು 54  ಕೊರೋ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 482 ಮಂದಿ ಕೊರೋನಾ ವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಕೊರೋನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 447 ಕ್ಕೇರಿದೆ. ಮೈಸೂರಿನಲ್ಲಿಂದು 06 ಮಂದಿ ಕೊರೋನಾ ವೈರಸ್ ಸೋಂಕಿತರು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ ಇದುವರೆಗೆ 37 ಮಂದಿ ಕೊರೋನಾ ವೈರಸ್ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಉಳಿದೆಲ್ಲಾ ಕೊರೋನಾ ವೈರಸ್ ಸೋಂಕಿತರಿಗೆ ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. (ಕೆ.ಎಸ್,ಎಸ್.ಎಚ್).

Leave a Reply

comments

Related Articles

error: