ಮೈಸೂರು

ವಿಚಾರಣೆ ವೇಳೆ ಆತ್ಮಹತ್ಯೆಗೆ ಯತ್ನಿಸಿದ ರೈತ : ಚಿಕಿತ್ಸೆ ಫಲಕಾರಿಯಾಗದೇ ಸಾವು

ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆತಂದಿದ್ದ ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕನಾಂಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತನನ್ನು ಗುಂಡ್ಲುಪೇಟೆ ತಾಲೂಕಿನ ಕಗ್ಗಲದಹುಂಡಿ ಗ್ರಾಮದ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ. ಈತ ಕಗ್ಗಲದ ಹುಂಡಿಯಲ್ಲಿ ನಿರ್ಮಾಣವಾಗುತ್ತಿರುವ ಚೀನಾ ಮೂಲದ ಚೆಂಡು ಮಲ್ಲಿಗೆ ಸಂಸ್ಕರಣ ಘಟಕ ಕಾರ್ಖಾನೆಯವರು ರೈತ ನಾಗೇಶ್ ವಿರುದ್ಧ ಕಾರ್ಖಾನೆಗೆ ಜಮೀನು ನೀಡುತ್ತಿಲ್ಲ ಎಂದು ದೂರು ನೀಡಿದ್ದರು. ಈ ಸಂಬಂಧ ಕಳೆದ ಎರಡು ದಿನಗಳ ಹಿಂದೆ ರೈತನನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಈ ಸಂದರ್ಭದಲ್ಲಿ ರೈತ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ನಂತರ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ರೈತ ನಾಗೇಶ್ ಸಾವನ್ನಪ್ಪಿದ್ದಾನೆ. ಇಂದರಿಂದ ರೈತರು ತೀವ್ರವಾದ ಪ್ರತಿಭಟನೆ ಮಾಡಬಹುದೆಂಬ ಉದ್ದೇಶದಿಂದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳವಾರ ಉಪಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ನಡೆಸಲು ಈಗಾಗಲೇ  ಅನುಮತಿ ಪಡೆದಿರುವವರಿಗೆ ಶಾಂತಯುತವಾಗಿ ಪ್ರಚಾರ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಇನ್ನೂಳಿದಂತೆ ಯಾವುದೇ ರೀತಿಯ ಪ್ರತಿಭಟನೆ ನಡೆಸದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಜೈನ್ ಆದೇಶ ಹೊರಡಿಸಿದ್ದಾರೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: