ದೇಶಪ್ರಮುಖ ಸುದ್ದಿ

ರಾಜಸ್ತಾನ ರಾಜಕೀಯ ಬಿಕ್ಕಟ್ಟು: ಡಿಸಿಎಂ, ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಸಚಿನ್ ಪೈಲಟ್ ವಜಾ

ಜೈಪುರ,ಜು.14-ರಾಜಸ್ತಾನ ರಾಜ್ಯ ಕಾಂಗ್ರೆಸ್ ನಲ್ಲಿ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದೆ. ಈ ನಡುವೆ ರಾಜಸ್ತಾನ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ವಜಾಗೊಳಿಸಲಾಗಿದೆ.

ಸಚಿನ್​ ಪೈಲಟ್​ನನ್ನು ಡಿಸಿಎಂ ಸ್ಥಾನ ಹಾಗೂ ರಾಜಸ್ಥಾನ ಕಾಂಗ್ರೆಸ್​ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ಕಾಂಗ್ರೆಸ್​ ವಕ್ತಾರ ರಣದೀಪ್​ ಸುರ್ಜೇವಾಲಾ ಹೇಳಿದ್ದಾರೆ.

ಬಂಡಾಯ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಕುರಿತು ಇಂದು ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಭೆಗೆ ಸಚಿನ್ ಪೈಲಟ್ ಗೈರಾಗಿದ್ದರು. ಸಭೆಯಲ್ಲಿ ಸಚಿನ್ ಪೈಲಟ್ ಅನ್ನು ಉಚ್ಛಾಟಿಸುವ ನಿರ್ಧಾರ ಕೈಗೊಳ್ಳಲಾಗಿದೆ.  ಅಲ್ಲದೆ, ಪೈಲಟ್ ಅವರ ಜೊತೆಗೆ ಬಂಡಾಯ ಸಾರಿದ್ದ ಮತ್ತಿಬ್ಬರು ಸಚಿವರನ್ನೂ ಕೂಡ ಉಚ್ಛಾಟಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಈ ಬಗ್ಗೆ ಮಾತನಾಡಿರುವ ರಣದೀಪ್ ಸುರ್ಜೇವಾಲಾ, ಬಹುಮತ ಹಾಜರುಪಡಿಸಲು 101 ಶಾಸಕರು ಸಾಕು. ಹೀಗಾಗಿ ಬಂಡಾಯವೆದ್ದಿರುವ ಸಚಿನ್​ ಪೈಲಟ್ ಹಾಗೂ ಬೆಂಬಲಿತ ಶಾಸಕರನ್ನು ಪಕ್ಷದಿಂದ ಕಿತ್ತೊಗೆಯಿರಿ ಎಂಬ ಕೂಗು ಕೇಳಿ ಬಂದಿದೆ. ಇದಕ್ಕೆ ಪೂರಕವಾಗಿ ಸಚಿನ್​ ಪೈಲಟ್​ನನ್ನು ಡಿಸಿಎಂ ಸ್ಥಾನ ಹಾಗೂ ರಾಜಸ್ಥಾನ ಕಾಂಗ್ರೆಸ್​ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದಿದ್ದಾರೆ.

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಕೂಡ ಸಚಿನ್​ ಪೈಲಟ್​ ಜತೆ ಮಾತನಾಡಿ ಬಂಡಾಯ ಶಮನಕ್ಕೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಹೀಗಿದ್ದರೂ ಸಭೆಗೆ ಪೈಲಟ್​ ಹಾಜರಾಗಿಲ್ಲ. ಇದು ಸಹಜವಾಗಿಯೇ ಉಳಿದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಡಿಎಸಿಂ ಸ್ಥಾನದಿಮದ ಕೆಳಗಿಳಿಸಲಾಗಿದೆ ಎಂದು ಹೇಳಿದ್ದಾರೆ. (ಎಂ.ಎನ್)

 

 

Leave a Reply

comments

Related Articles

error: