ಮೈಸೂರು

  ಕೋವಿಡ್-19; ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯ ಚಿಕಿತ್ಸೆಗೆ ಜಿಲ್ಲಾಧಿಕಾರಿಗಳ ಆದೇಶ

ಮೈಸೂರು,ಜು.14:-  ಕೋವಿಡ್-19 ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿರುವ ಕೋವಿಡ್ ಕೇರ್ ಸೆಂಟರ್, ಜಿಲ್ಲಾ ಆಸ್ಪತ್ರೆ ಹಾಗೂ ಕೋವಿಡ್‍-19 ಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಸ್ಥಾಪಿಸಲ್ಪಟ್ಟ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಪ್ರವೇಶ ನೀಡಿ ಚಿಕಿತ್ಸೆಗೊಳಪಡಿಸಲು ಸೂಚಿಸಿದ್ದಲ್ಲಿ ಸಂಬಂಧಪಟ್ಟ ಖಾಸಗಿ ಆಸ್ಪತ್ರೆಗಳು ಸೋಂಕಿತ ವ್ಯಕ್ತಿಯನ್ನು ಕಡ್ಡಾಯವಾಗಿ ದಾಖಲಿಸಿಕೊಂಡು ಚಿಕಿತ್ಸೆಗೊಳಪಡಿಸುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಆದೇಶಿಸಿದ್ದಾರೆ.

ಈ ಆದೇಶವನ್ನು ಕ್ರಮವಹಿಸಲು ನಿರಾಕರಿಸಿದ್ದಲ್ಲಿ Karnataka private Medical Establishments Act  ಪ್ರಕಾರ ತಕ್ಷಣ ಸೂಕ್ತ ಕ್ರಮವಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: