ಕರ್ನಾಟಕ

ಶಿವಮೊಗ್ಗ ಎಸ್ಎಸ್ಎಲ್ ಸಿ ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಶಿಕ್ಷಕ ಸಾವು

ಶಿವಮೊಗ್ಗ,ಜು.15-ನಗರದ ಎಸ್ಎಸ್ಎಲ್ ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರದಲ್ಲಿ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಭದ್ರಾವತಿ ಈಶ್ವರಮ್ಮ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಕುಮಾರ್ (48) ಮೃತಪಟ್ಟವರು. ಮಧ್ಯಾಹ್ನ ಊಟ ಮಾಡುವಾಗ ಕುಸಿದುಬಿದ್ದ ಅವರನ್ನು ಶಿಕ್ಷಕರು ಕೂಡಲೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟೋತ್ತಿಗಾಗಲೇ ಅವರು ಮೃತಪಟ್ಟಿದ್ದರು.

ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜು.13 ರಿಂದ ಎಸ್ಎಸ್ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ. ಒಟ್ಟು 228 ಮೌಲ್ಯಮಾಪನ ಕೇಂದ್ರಗಳನ್ನು ತೆರೆಯಲಾಗಿದ್ದು, ವಿಷಯವಾರು ಒಟ್ಟು 71,154 ಮೌಲ್ಯಮಾಪಕರನ್ನು ನೇಮಿಸಲಾಗಿದೆ. ಮೌಲ್ಯಮಾಪನ ಕೇಂದ್ರದ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಜುಲೈನಲ್ಲಿ ಮೌಲ್ಯಮಾಪನ ಕಾರ್ಯ ಮುಗಿಯಲಿದ್ದು, ಆಗಸ್ಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. (ಎಂ.ಎನ್)

Leave a Reply

comments

Related Articles

error: