ಮೈಸೂರು

ಸೌದಿ ಮೈಸೂರು ಯುವಕ ಅನುಮಾನಾಸ್ಪದ ಸಾವು ಪ್ರಕರಣ: ಪ್ರತಾಪ್ ಸಿಂಹ್ ಟ್ವೀಟ್ ಗೆ ಸುಷ್ಮಾ ಪ್ರತಿಕ್ರಿಯೆ

ಸೌದಿಯಲ್ಲಿ ಮೈಸೂರು ವಿದ್ಯಾರಣ್ಯಪುರಂ ವ್ಯಕ್ತಿ ಶಬೀರ್ ಅನುಮಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಮಾಡಿದ ಟ್ವೀಟ್‍ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಮಾರ್ಚ್ 25 ರಂದು ಶಬೀರ್ (24) ಎಂಬವರು ಸೌದಿಯಲ್ಲಿ ಮೃತರಾಗಿದ್ದರು. 9 ತಿಂಗಳ ಹಿಂದೆ ಡ್ರೈವರ್ ಕೆಲಸಕ್ಕಾಗಿ ಶಬೀರ್ ಸೌದಿಗೆ ತೆರಳಿದ್ದರು. ಮೂರು ದಿನಗಳ ಹಿಂದೆ ನೇಣುಬಿಗಿದ ಸ್ಥಿತಿಯಲ್ಲಿ ಶಬೀರ್ ಶವ ಪತ್ತೆಯಾಗಿತ್ತು. ಶವದ ಸ್ಥಿತಿ ನೋಡಿದ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡಿದ್ದರು.ಶಬೀರ್ ಮೃತದೇಹವನ್ನು ಭಾರತಕ್ಕೆ ಕಳುಹಿಸಲು ಅಲ್ಲಿನ ಕಂಪೆನಿ ಮಾಲೀಕರು 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಶಬ್ಬಿರ್ ಮೃತದೇಹ ತರಿಸಿಕೊಡುವಂತೆ ಸಂಸದ ಪ್ರತಾಪ್ ಸಿಂಹಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಪ್ರತಾಪ್ ಸಿಂಹ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪತ್ರ ಬರೆದು ಟ್ವೀಟ್ ಕೂಡ ಮಾಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸುಷ್ಮಾ ಸ್ವರಾಜ್ ಭಾರತೀಯ ರಾಯಭಾರಿ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. (ಕೆ.ಎಸ್.ಎಸ್.ಎಚ್)

Leave a Reply

comments

Related Articles

error: