
ಪ್ರಮುಖ ಸುದ್ದಿ
ರಾಜ್ಯದಲ್ಲಿ ಮುಂದುವರಿದ ಮುಂಗಾರು : ಐದು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್
ರಾಜ್ಯ(ಬೆಂಗಳೂರು)ಜು.18:- ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಇಂದು ರಾಜ್ಯದ 5 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ,ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗದ ಕೆಲವು ಪ್ರದೇಶಗಳು, ಚಿಕ್ಕಮಗಳೂರು, ಕೊಡಗಿನ ಕೆಲ ಭಾಗ ಹಾಗೂ ಚಿಕ್ಕಮಗಳೂರಿನಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಮುಂಜಾಗೃತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಕೊಡಗು, ಹಾಸನ, ಚಾಮರಾಜನಗರ ಭಾಗದಲ್ಲಿ ಇಂದು ಸಾಮಾನ್ಯ ಮಳೆ ಆಗಲಿದೆ.ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಆಗುತ್ತಿದೆ. ಅಲ್ಲದೆ, ಕಡಲ ತೀರದಲ್ಲಿ ವೇಗವಾಗಿ ಗಾಳಿ ಬೀಸುತ್ತಿದೆ. ಪರಿಣಾಮ, ಸಮುದ್ರದಲ್ಲಿ ದೊಡ್ಡ ದೊಡ್ಡ ಅಲೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. (ಕೆ.ಎಸ್,ಎಸ್.ಎಚ್)