ಮೈಸೂರು

ನಿನ್ನೆ 93ಮಂದಿಯಲ್ಲಿ ಕೊರೋನಾ ಸೋಂಕು ದೃಢ : ಸಾವಿನ ಸಂಖ್ಯೆ 57ಕ್ಕೇರಿಕೆ; 805 ಸಕ್ರಿಯ ಪ್ರಕರಣ

ಮೈಸೂರು,ಜು.18:- ಮೈಸೂರು ಜಿಲ್ಲೆಯಲ್ಲಿ ಶುಕ್ರವಾರ 93ಮಂದಿಯಲ್ಲಿ ಕೋವಿಡ್-19 ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 1,413ಕ್ಕೇರಿಕೆಯಾಗಿದೆ.

ನಿನ್ನೆ ಏಳು ಮಂದಿ ಮೃತಪಟ್ಟಿದ್ದು ಮೃತರ ಸಂಖ್ಯೆ 57ಕ್ಕೇರಿಕೆಯಾಗಿದೆ. 80,69,63,47,49,48ವರ್ಷ ವಯಸ್ಸಿನ ಪುರುಷರು ಹಾಗೂ 52ವರ್ಷ ವಯಸ್ಸಿನ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಇವರೆಲ್ಲ ತೀವ್ರ  ಸಮಸ್ಯೆಯಿಂದ ಬಳಲುತ್ತಿದ್ದರು. ಇವರಲ್ಲಿ ನಾಲ್ಕುಮಂದಿ ಜು.15ರಂದು ಆಸ್ಪತ್ರೆಗೆ ದಾಖಲಾಗಿ ಮರುದಿನವೇ ಮೃತಪಟ್ಟಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಮೂವರು ಗರ್ಭಿಣಿಯರು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 11ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ ಬಳಲುತ್ತಿದ್ದ 24ಮಂದಿ, ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ 17ಮಂದಿಯಲ್ಲಿ ಹಾಗೂ ಪ್ರಾಥಮಿಕ ಸಂಪರ್ಕಿತ 38ಮಂದಿಯಲ್ಲಿ ಸೋಂಕಿರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು 805ಕ್ಕೆ ಏರಿಕೆಯಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ 245ಮಂದಿ, ಕೋವಿಡ್ ಹೆಲ್ತ್ ಕೇರ್ ಸೆಂಟರ್ ನಲ್ಲಿ 75ಮಂದಿ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ 110ಮಂದಿ, ಖಾಸಗಿ ಆಸ್ಪತ್ರೆಗಳಲ್ಲಿ 85 ಹಾಗೂ 290ಮಂದಿ ಮನೆಯಲ್ಲೇ ಐಸೋಲೇಶನ್ ನಲ್ಲಿದ್ದಾರೆ.

ಮೈಸೂರು ನಗರ ಸೇರಿದಂತೆ ಮೈಸೂರು ಜಿಲ್ಲೆಯಲ್ಲಿ ಹೊಸದಾಗಿ 78 ಪ್ರದೇಶಗಳನ್ನು ಕಂಟೈನ್ ಮೆಂಟ್ ಝೋನ್ ಗಳೆಂದು ಘೋಷಣೆ ಮಾಡಲಾಗಿದೆ. 2,037ಮಂದಿಯನ್ನು 14 ದಿನಗಳ ಹೋಂಕ್ವಾರೆಂಟೈನ್ ಮಾಡಲಾಗಿದ್ದು, ಒಟ್ಟು 30,205ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: