ದೇಶಪ್ರಮುಖ ಸುದ್ದಿ

ಅಮರನಾಥನ ದರ್ಶನ ಪಡೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಶ್ರೀನಗರ,ಜು.18-ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಅಮರನಾಥ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಜಮ್ಮು-ಕಾಶ್ಮೀರದ ಪವಿತ್ರ ಗುಹೆಯಲ್ಲಿ ಅಮರನಾಥನಿಗೆ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ಸಚಿವರು ಸುಮಾರು ಒಂದು ಗಂಟೆ ಅಮರನಾಥ ದೇಗುಲದಲ್ಲಿ ತಂಗಿದ್ದರು ಎಂದು ಮೂಲಗಳು ತಿಳಿಸಿವೆ.

ಅಮರನಾಥ ದೇಗುಲಕ್ಕೆ ಭೇಟಿ ನೀಡಿದ ರಾಜನಾಥ್ ಸಿಂಗ್ ಗೆ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಇತರರು ಸಾಥ್ ನೀಡಿದರು.

ಸದ್ಯ ಜಮ್ಮು-ಕಾಶ್ಮೀರ ಪ್ರವಾಸದಲ್ಲಿರುವ ಸಚಿವರು ನಿನ್ನೆ ಉನ್ನತ ಸೇನಾಧಿಕಾರಿಗಳ ಜತೆ ಮಾತುಕತೆ ನಡೆಸಿ ಒಟ್ಟಾರೆ ಭದ್ರತಾ ಸನ್ನಿವೇಶದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಪಾಕಿಸ್ತಾನದ ಜತೆಗಿನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಒಸಿ) ಕಟ್ಟುನಿಟ್ಟಿನ ಕಣ್ಗಾವಲು ಮತ್ತು ಎಚ್ಚರಿಕೆ ವಹಿಸುವಂತೆಯೂ ಸಚಿವರು ಮಾತುಕತೆ ವೇಳೆ ಸಶಸ್ತ್ರ ಪಡೆಗಳಿಗೆ ಸೂಚಿಸಿದ್ದರು. (ಎಂ.ಎನ್)

Leave a Reply

comments

Related Articles

error: