ಮೈಸೂರು

ಬದನವಾಳು ಗ್ರಾಮಕ್ಕೆ ಜಿಲ್ಲಾಧಿಕಾರಿ ಡಿ.ರಂದೀಪ್ ಭೇಟಿ

ಅತಿಸೂಕ್ಷ್ಮ ಮತಗಟ್ಟೆ ಹೊಂದಿರುವ ನಂಜನಗೂಡು ವಿಧಾನಸಭಾ ಕ್ಷೇತ್ರದ ಬದನವಾಳು ಗ್ರಾಮಕ್ಕೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಿ.ರಂದೀಪ್   ಭೇಟಿ ನೀಡಿ ಗ್ರಾಮಸ್ಥರಿಗೆ ಶಾಂತಿಯುತ ಚುನಾವಣೆಯ ಭರವಸೆ ಮೂಡಿಸಿದರು.
ಪೊಲೀಸ್ ಅಧೀಕ್ಷಕ ರವಿ. ಡಿ. ಚೆನ್ನಣ್ಣನವರ್, ಚುನಾವಣಾಧಿಕಾರಿ ಜಿ.ಜಗದೀಶ್ ಅವರೊಂದಿಗೆ ಗ್ರಾಮಕ್ಕೆ ತೆರಳಿದ ಜಿಲ್ಲಾಧಿಕಾರಿಗಳು ಈ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ. ಮತದಾರರು ನಿರ್ಭೀತಿಯಿಂದ ಮತಗಟ್ಟೆಗಳಿಗೆ ಬಂದು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.
ಚುನಾವಣಾ ಅಕ್ರಮಗಳು ಕಂಡುಬಂದಲ್ಲಿ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಎಚ್ಚರ ವಹಿಸಲಾಗುವುದು ಎಂದು ತಿಳಿಸಿದರು.  (ಬಿ.ಎಂ-ಎಸ್.ಎಚ್)

Leave a Reply

comments

Related Articles

error: