ಪ್ರಮುಖ ಸುದ್ದಿ

ರಾಜ್ಯದಲ್ಲಿ ಒಟ್ಟು 4537 ಮಂದಿಗೆ ಪಾಸಿಟಿವ್ ದೃಢ : 93 ಮಂದಿ ಬಲಿ

ರಾಜ್ಯ(ಬೆಂಗಳೂರು)ಜು.18:-  ರಾಜ್ಯದಲ್ಲಿ ಕೊರೋನಾ ವೈರಸ್ ಮಹಾಮಾರಿ ಮುಂದುವರಿದಿದ್ದು,  ರಾಜ್ಯದಲ್ಲಿ ಒಟ್ಟು 4537 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 59,652ಕ್ಕೇರಿಕೆಯಾಗಿದೆ.

ಇಂದು ಒಂದೇ ದಿನ ಬರೋಬ್ಬರಿ 93 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 49 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 93 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.  ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2125 ಪ್ರಕರಣಗಳು ವರದಿಯಾಗಿದೆ.

ಕಳೆದ 24 ಗಂಟೆಗಳಲ್ಲಿ 1018 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ದಕ್ಷಿಣ ಕನ್ನಡ 509 ಧಾರವಾಡದಲ್ಲಿ 186, ಬಳ್ಳಾರಿಯಲ್ಲಿ 155, ಬೆಳಗಾವಿಯಲ್ಲಿ 137, ವಿಜಯಪುರ 175 ಹಾಗೂ ಯಾದಗಿರಿಯಲ್ಲಿ 4 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟು 36,631 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 22,498 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಕೊರೋನಾ ಮರಣ ಪ್ರಮಾಣ ಶೇ.2.08ರಷ್ಟಿದ್ದರೆ, ಬೆಂಗಳೂರಿನಲ್ಲಿ ಶೇ.2.13ರಷ್ಟಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: