ಮೈಸೂರು

ಭೀಮನ ಅಮಾವಾಸ್ಯೆ: ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಂದ ಪೂಜೆ

ಮೈಸೂರು,ಜು.20-ಭೀಮನ ಅಮಾವಾಸ್ಯೆಯ ಪ್ರಯುಕ್ತ ನಜರ್ ಬಾದ್ ನ ಮಲೆ ಮಹದೇಶ್ವರ ರಸ್ತೆಯಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಭಕ್ತ ಸಾಗರವೇ ಹರಿದುಬಂದಿತ್ತು.

ಕೊರೊನಾ ವೈರಸ್ ನಡುವೆಯೂ ಭಕ್ತರು ಎಂದಿನಂತೆ ದೇಗುಲಕ್ಕೆ ಬಂದು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ದೇವರ ದರ್ಶನಕ್ಕಾಗಿ ದೇಗುಲದ ಹೊರಗೆ ಸರತಿ ಸಾಲಿನಲ್ಲಿ ಭಕ್ತರು ನಿಂತಿದ್ದರು. ಭಕ್ತರು ಮಾಸ್ಕ್ ಧರಿಸಿದ್ದರು. ಆದರೆ ಸಾಮಾಜಿಕ ಅಂತರ ಪಾಲನೆಯಾಗಲಿಲ್ಲ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದರೂ ಭೀಮನ ಅಮಾವಾಸ್ಯೆಯ ಪೂಜೆ ಸಲ್ಲಿಸಲು ಸಾರ್ವಜನಿಕರು ದೇಗುಲಕ್ಕೆ ಆಗಮಿಸಿರುವುದು ಆಶ್ಚರ್ಯವನ್ನುಂಟು ಮಾಡಿತ್ತು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: