ಮೈಸೂರು

ಅಂತಿಮ ಸೆಮಿಸ್ಟರ್ ಪರೀಕ್ಷೆ ಆರಂಭಕ್ಕೂ ಮುನ್ನ ಆರೋಗ್ಯ ಸುರಕ್ಷಾ ಕ್ರಮ ಕೈಗೊಳ್ಳಲು ಪ್ರಾಂಶುಪಾಲರ ಸಭೆ ನಡೆಸುವಂತೆ ಮರಿತಿಬ್ಬೇಗೌಡ ಮನವಿ

ಮೈಸೂರು,ಜು.21:-  ಮೈಸೂರು ವಿವಿಯ ಪದವಿ, ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಪ್ರಾರಂಭಿಸುವ ಸಂಬಂಧ ಪರೀಕ್ಷಾ ಕೇಂದ್ರಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಹಾಗೂ ಆರೋಗ್ಯ ಸುರಕ್ಷಾ ಕ್ರಮ ಕೈಗೊಳ್ಳಲು ವಿವಿ ವ್ಯಾಪ್ತಿಯ ಎಲ್ಲಾ ಕಾಲೇಜುಗಳ ಪ್ರಾಂಶು ಪಾಲರ ಸಭೆ ನಡೆಸುವಂತೆ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‍ಕುಮಾರ್ ಅವರಿಗೆ ಪತ್ರದ ಮೂಲಕ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಮನವಿ ಮಾಡಿದ್ದಾರೆ.

ಅವರು ಪತ್ರದಲ್ಲಿ ಪರೀಕ್ಷೆಗೆ ಸಂಬಂಧಿಸಿದಂತೆ ವಿವಿ ವ್ಯಾಪ್ತಿಯ ಎಲ್ಲಾ ಕಾಲೇಜಿನ ಪ್ರಾಂಶುಪಾಲರ ಸಭೆ ನಡೆಸಿ ಎಲ್ಲಾ ಪರೀಕ್ಷೆ ಕೇಂದ್ರ ಗಳ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಕ್ರಮ ವಹಿಸಬೇಕು. ಜೊತೆಗೆ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗೆ ಸಂಬಂಧಿಸಿದಂತೆ ಆರೋಗ್ಯ ಸುರಕ್ಷಾ ಕ್ರಮಗಳ ಬಗ್ಗೆಯೂ ಸೂಕ್ತ ಕ್ರಮ ಗಳನ್ನು ಕೈಗೊಳ್ಳಬೇಕು. ಆ ಮೂಲಕ ಸೂಕ್ತ ಪೂರ್ವ ಸಿದ್ಧತೆಯೊಂದಿಗೆ ಪಿಯುಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾದರಿ ಪದವಿ, ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವಂತೆ ವಿನಂತಿ ಮಾಡಿದ್ದಾರೆ. ಪತ್ರಿಕಾ ಸಂಸ್ಥೆಯೊಂದರ ಸಂವಾದದಲ್ಲಿ ವಿವಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಆಗಸ್ಟ್ ತಿಂಗ ಳಲ್ಲಿ ಪ್ರಾರಂಭಿಸುವುದಾಗಿ ತಾವು (ಕುಲಪತಿಗಳು) ತಿಳಿ ಸಿರುವುದನ್ನು ಸ್ವಾಗತಿಸುತ್ತೇನೆ. ಪರೀಕ್ಷೆಗಳ ಪ್ರಾರಂಭಕ್ಕೂ ಮೊದಲು ವಿದ್ಯಾರ್ಥಿಗಳ ಅನುಕೂಲಕ್ಕಾಗಿ 10 ದಿನ ತರಗತಿಗಳನ್ನು ನಡೆಸುವುದಾಗಿ ತಾವು ಹೇಳಿದ್ದು, ಇದನ್ನು ಕನಿಷ್ಠ 15 ದಿನಗಳಿಗೆ ವಿಸ್ತರಿಸಬೇಕೆಂದು ಕೋರಿದ್ದಾರೆ.

ಪದವಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಉಪನ್ಯಾಸಕರು ಹಾಸನ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಿಂದ ಮೈಸೂರಿಗೆ ಬರಲು ಸರಿಯಾಗಿ ಬಸ್ ಹಾಗೂ ರೈಲು ಸೌಲಭ್ಯವಿಲ್ಲ. ಅಲ್ಲದೆ, ಅವರು ಕನಿಷ್ಠ 15 ದಿನಗಳು ಮೈಸೂರಿನಲ್ಲಿ ಉಳಿಯಲು ಸೌಕರ್ಯಗಳು ಇಲ್ಲ. ಈ ಎಲ್ಲಾ ಕಾರಣದಿಂದ ಹೆಚ್ಚು ಸಂಖ್ಯೆಯಲ್ಲಿ ಇರುವ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಆಯಾಯ ಜಿಲ್ಲಾ ಕೇಂದ್ರದಲ್ಲಿ ಉತ್ತಮ ಸೌಕರ್ಯ ಹೊಂದಿ ರುವ ಪದವಿ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ಎಲ್ಲಾ ಸಿದ್ಧತೆ ಮಾಡಬೇಕೆಂದು ಮನವಿ ಮಾಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: