ಪ್ರಮುಖ ಸುದ್ದಿ

ಇನ್ಮುಂದೆ ಲಾಕ್ ಡೌನ್ ಮಾತೇ ಇಲ್ಲಾ : ಆರ್ಥಿಕ ಪರಿಸ್ಥಿತಿ ಸರಿಪಡಿಸುವುದೇ ಮುಖ್ಯ : ಸಿಎಂ ಬಿ.ಎಸ್.ಯಡಿಯೂರಪ್ಪ

ರಾಜ್ಯ(ಬೆಂಗಳೂರು)ಜು.21:-  ಕೊರೋನಾ ವೈರಸ್ ತೆಡೆಗೆ ಲಾಕ್ ಡೌನ್ ವೊಂದೇ ಪರಿಹಾರವಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗಗಳಲ್ಲಿಯೂ ಲಾಕ್ ಡೌನ್ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡುವುದು ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಲ್ಲಿ ಹೇರಿಕೆಯಾಗಿರುವ ಲಾಕ್ ಡೌನ್ ಆದೇಶವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ್ಲಲಿ ಆರ್ಥಿಕ ಪರಿಸ್ಥಿತಿಯನ್ನು ಸರಿಪಡಿವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚೆಯನ್ನು ನಡೆಸಲಾಗಿದೆ. ಯಾವ ಜಿಲ್ಲಾಧಿಕಾರಿಗಳು ಕೂಡ ಲಾಕ್ ಡೌನ್ ಬಗ್ಗೆ ಮಾತನಾಡದಂತೆ ಸೂಚನೆಯನ್ನು ನೀಡಿದ್ದೇನೆ ಎಂದಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ತೆರವು ಮಾಡುತ್ತಿದ್ದಂತೆಯೇ ಅತೀ ಹೆಚ್ಚು ಕೊರೊನಾ ಸೋಂಕು ಇರುವ ರಾಜ್ಯಗಳಿಂದ ಜನರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿದೆ. ಇನ್ಮುಂದೆ ಲಾಕ್ ಡೌನ್ ಹೇರಿಕೆಯನ್ನು ಮಾಡದೇ, ಕಂಟೈನ್ಮೆಂಟ್ ಝೋನ್ ಗಳಲ್ಲಿ ಬಿಗಿ ಕ್ರಮವನ್ನು ಕೈಗೊಳ್ಳಲು ಸೂಚನೆಯನ್ನು ನೀಡಲಾಗಿದೆ.

ರಾಜ್ಯದ ಜನರು ಮಾಸ್ಕ್ ಬಳಸಿ ಸಾಮಾಜಿಕ ಅಂತರವನ್ನು ಕಾಪಾಡಬೇಕಿದೆ. ಮಾಸ್ಕ್ ಧರಿಸದೇ ಇರುವವರ ವಿರುದ್ದ ಕಠಿಣಕ್ರಮವನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: