ಪ್ರಮುಖ ಸುದ್ದಿ

ರಾಜ್ಯ ವಿಧಾನ ಪರಿಷತ್​ಗೆ ಐವರ ನಾಮನಿರ್ದೇಶನ : ಮಾಜಿ ಸಚಿವ ಹೆಚ್.ವಿಶ್ವನಾಥ್ ಹೆಸರೂ ಕೂಡ ನಾಮನಿರ್ದೇಶನದಲ್ಲಿ

ರಾಜ್ಯ(ಬೆಂಗಳೂರು)ಜು.22:-  ಒಂದು ವರ್ಷದ ಹಿಂದೆ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾಂಗ್ರೆಸ್​-ಜೆಡಿಎಸ್​ ಬಂಡಾಯ ಶಾಸಕರ ಮುಂದಾಳತ್ವ ವಹಿಸಿದ್ದ ಮಾಜಿ ಶಾಸಕ ಎಚ್. ವಿಶ್ವನಾಥ್ ಅವರನ್ನು ರಾಜ್ಯ ವಿಧಾನ ಪರಿಷತ್​ಗೆ ನಾಮನಿರ್ದೇಶನ ಮಾಡಲಾಗಿದೆ. ಕೊನೆಗೂ   ಕೊಟ್ಟ ಮಾತು ಉಳಿಸಿಕೊಳ್ಳುವಲ್ಲಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಸಫಲರಾಗಿದ್ಧಾರೆ.

ಹೆಚ್ ವಿಶ್ವನಾಥ, ಸಿ. ಪಿ ಯೋಗೇಶ್ವರ್,  ಭಾರತಿ ಶೆಟ್ಟಿ, ಸಾಯಿಬಣ್ಣ ತಳವಾರ, ಶಾಂತಾರಾಂ ಸಿದ್ದಿ ಅವರನ್ನು ವಿಧಾನ ಪರಿಷತ್​ಗೆ ನಾಮನಿರ್ದೇಶನ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ಧಾರೆ.

ಸಾಹಿತ್ಯ ಕ್ಷೇತ್ರದಿಂದ ಎಚ್​. ವಿಶ್ವನಾಥ್​​​, ಸಿನಿಮಾ ಕ್ಷೇತ್ರದಿಂದ ಸಿ.ಪಿ ಯೋಗೇಶ್ವರ್​​, ಸಮಾಜ ಸೇವೆ ಕ್ಷೇತ್ರದಿಂದ ಭಾರತಿ ಶೆಟ್ಟಿ, ಶಿಕ್ಷಣ ಕ್ಷೇತ್ರದಿಂದ ಸಾಬಣ್ಣ ತಳವಾರ, ಬುಡಕಟ್ಟು ಕ್ಷೇತ್ರದಿಂದ ಶಾಂತಾರಾಂ ಸಿದ್ದಿ ಅವರನ್ನು ಪರಿಷತ್​​ಗೆ ನಾಮನಿರ್ದೇಶನ ಮಾಡಲಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟದಿಂದ ಅಚ್ಚರಿಯ ಆಯ್ಕೆ ಮಾಡಿದ್ದ ಬಿಜೆಪಿ ಹೈಕಮಾಂಡ್ ಈಗ ವಿಧಾನಪರಿಷತ್​ಗೆ ನಾಮನಿರ್ದೇಶನದ ವಿಚಾರದಲ್ಲೂ ಅಚ್ಚರಿಯ ಆಯ್ಕೆ ಮಾಡಿದೆ. ಸಂಘದ ಹಿನ್ನೆಲೆಯ ಮೂವರು ಭಾರತಿ ಶೆಟ್ಟಿ, ಸಾಬಣ್ಣ ತಳವಾರ, ಶಾಂತಾರಾಂ ಸಿದ್ದಿರನ್ನು ಪರಿಷತ್​ಗೆ ನಾಮನಿರ್ದೇಶನ ಮಾಡಿದೆ.

ಸಿಎಂ ಬಿಎಸ್​ ಯಡಿಯೂರಪ್ಪನವರ ಸೂಚನೆಯಂತೆ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್,  ಸಿ.ಪಿ. ಯೋಗೇಶ್ವರ್ ಅವರನ್ನು ಬಿಜೆಪಿ ಕೈಮಾಂಡ್​​​ ಪರಿಷತ್​​ಗೆ ನಾಮನಿರ್ದೇಶನ ಮಾಡಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: