ಪ್ರಮುಖ ಸುದ್ದಿಮೈಸೂರು

ವಿಶ್ವನಾಥ ಅವರಿಗೆ ಸಿಕ್ಕ ಗೌರವ : ಸಚಿವ ಎಸ್.ಟಿ.ಸೋಮಶೇಖರ್  

ಮೈಸೂರು/ಬೆಂಗಳೂರು,ಜು.22:-  ಮಾಜಿ ಸಚಿವರು, ಮುತ್ಸದ್ದಿ ರಾಜಕಾರಣಿ, ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಅನುಭವವನ್ನು ಹೊಂದಿರುವ ಅಡಗೂರು ಎಚ್. ವಿಶ್ವನಾಥ್ ಅವರನ್ನು ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಿರುವ  ಮುಖ್ಯಮಂತ್ರಿಗಳಾದ   ಬಿ.ಎಸ್.ಯಡಿಯೂರಪ್ಪ ಅವರು ಹಾಗೂ ಬಿಜೆಪಿ ವರಿಷ್ಠರ ಕ್ರಮವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ವಾಗತಿಸಿದ್ದಾರೆ.

ಮುಖ್ಯಮಂತ್ರಿಗಳು ಕೊಟ್ಟ ಮಾತನ್ನು ತಪ್ಪುವವರಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸೂಕ್ತ ಸ್ಥಾನಮಾನವನ್ನು ಕಲ್ಪಿಸಿಕೊಟ್ಟಿರುವುದಕ್ಕೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: