ಮೈಸೂರು

ರೈತನ ಮೇಲೆ ಚಿರತೆ ದಾಳಿ : ಗಾಯ

ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.

ಗಾಯಗೊಂಡ ರೈತನನ್ನು ಮಹದೇವಸ್ವಾಮಿ (29) ಎಂದು ಗುರುತಿಸಲಾಗಿದೆ. ಎಚ್.ಡಿ.ಕೋಟೆ ತಾಲೂಕಿನ ಆನಗಟ್ಟಿ ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಏಕಾಏಕಿ ಚಿರತೆ ದಾಳಿ ನಡೆಸಿದೆ. ಇದರಿಂದ ಮಹದೇವಸ್ವಾಮಿ ಗಾಯಗೊಂಡಿದ್ದಾರೆ.

ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: