ಮೈಸೂರು

ರಾಜ್ಯ ಸರ್ಕಾರಕ್ಕೆ ಒಂದು ವರ್ಷ: ಕಾರ್ಯಕ್ರಮದ ನೇರ ಪ್ರಸಾರ

ಮೈಸೂರು, ಜು,27:- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ಒಂದು ವರ್ಷ ಪೂರ್ಣಗೊಳಿಸಿರುವ ಸುಸಂದರ್ಭದಲ್ಲಿ “ಆಡಳಿತ 1 ವರ್ಷ: ಸವಾಲುಗಳ ವರ್ಷ-ಪರಿಹಾರದ ಸ್ಪರ್ಶ” ಎಂಬ ಕಾರ್ಯಕ್ರಮ ಇಂದು   ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದ್ದು, ವರ್ಚುವಲ್ ವೇದಿಕೆಯ ಮೂಲಕ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನೇರ  ಪ್ರಸಾರವಾಗಲಿದೆ.

ಸರ್ಕಾರದ ಒಂದು ವರ್ಷದ ಸಾಧನೆ ಕುರಿತು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳು ಸಂಪಾದಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ ಸಾಧನಾ ಪುಸ್ತಕ ಬಿಡುಗಡೆ ಸಮಾರಂಭ ಹಾಗೂ ಮುಖ್ಯಮಂತ್ರಿಗಳು ಫಲಾನುಭವಿಗಳೊಂದಿಗೆ ನಡೆಸುವ ನೇರ ಸಂವಾದ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಗೆ ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಪುಟಕಿಟ್ಟ ಚಿನ್ನ ಕಿರು ಪುಸ್ತಕದ ಬಿಡುಗಡೆ, ಸಾಕ್ಷ್ಯಚಿತ್ರ ಪ್ರಸಾರ, ಮತ್ತಿತರ ಕಾರ್ಯಕ್ರಮಗಳನ್ನು ವರ್ಚುವಲ್ ವೇದಿಕೆ ಮೂಲಕ ವೀಕ್ಷಿಸಬಹುದು.

ಈ ಸಂದರ್ಭದಲ್ಲಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ.ಸೋಮಶೇಖರ್, ಸ್ಥಳೀಯ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು, ಗಣ್ಯರು, ವಿವಿಧ ಯೋಜನೆಗಳ ಫಲಾನುಭವಿಗಳು, ಕೋವಿಡ್‌ನಿಂದ ಗುಣಮುಖರಾದ ವ್ಯಕ್ತಿಗಳು ಉಪಸ್ಥಿತರಿರುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: