ಕರ್ನಾಟಕಪ್ರಮುಖ ಸುದ್ದಿ

ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವಂತಿಲ್ಲ: ಸರ್ಕಾರದ ಎಚ್ಚರಿಕೆ

ಬೆಂಗಳೂರು,ಜು.28-ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವಂತಿಲ್ಲ. ಸರ್ಕಾರದ ಆದೇಶ ಮೀರಿ ನಡೆದುಕೊಂಡರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೋವಿಡ್ ಟೆಸ್ಟ್ ವರದಿ ಇಲ್ಲವೆಂದು ಯಾವುದೇ ಖಾಸಗಿ ಆಸ್ಪತ್ರೆಯೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ಕೊರೊನಾ ಲಕ್ಷಣವಿರಲಿ ಅಥವಾ ಬೇರೆ ಯಾವುದೇ ಖಾಯಿಲೆ ಇರಲಿ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯವಿದ್ದೂ ದಾಖಲಾತಿ ನಿರಾಕರಿಸಿದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಆರೋಗ್ಯ ಸಚಿವ ಶ್ರೀರಾಮುಲು ಅವರು, ರಾಜ್ಯದ ಯಾವುದೇ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೋವಿಡ್ ಸೋಂಕು ಅಥವಾ ಕೋವಿಡ್ ಸೋಂಕಿನಂತಹ ರೋಗ ಲಕ್ಷಣಗಳುಳ್ಳ ರೋಗಿಗಳನ್ನು ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. (ಎಂ.ಎನ್)

Leave a Reply

comments

Related Articles

error: