ಮೈಸೂರು

ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆ : ವಿವಿಧ ಸಸಿ ನೆಡುವ ಮೂಲಕ ಶುಭ ಹಾರೈಕೆ

ಮೈಸೂರು,ಜು.28:- ಬಿಜೆಪಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಯುವಮೋರ್ಚಾ ವತಿಯಿಂದ  ರಾಜ್ಯದ ಮುಖ್ಯಮಂತ್ರಿಗಳಾದ    ಬಿ.ಎಸ್.ಯಡಿಯೂರಪ್ಪ ನವರ  ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಗಾಂಧಿನಗರದ ಎ.ಜೆ.ಬ್ಲಾಕ್ ನಲ್ಲಿರುವ ಉದ್ಯಾನ ವನದಲ್ಲಿಂದು  ವಿವಿಧ ಸಸಿಗಳನ್ನು ನೆಡುವ ಮೂಲಕ ಯಡಿಯೂರಪ್ಪನವರಿಗೆ ಶುಭ ಕೋರಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಎಚ್ ಜಿ ಗಿರಿಧರ್  ಮಾತನಾಡಿ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರಣಿ ಸವಾಲುಗಳ ನಡುವೆಯೂ ಗಟ್ಟಿಯಾಗಿ ನಿಂತು ಜನರ ಮನಸ್ಸು ಗೆದ್ದಿದ್ದಾರೆ. ಮುಂದೆಯೂ ಉತ್ತಮ ಆಡಳಿತ ನೀಡಲಾಗುವುದು. ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್‌ನವರು ತಮ್ಮ ಕೆಲಸ ಮಾಡಲಿ ಎಂದರು.

ಕಾರ್ಯಕ್ರಮದಲ್ಲಿ ಎನ್.ಆರ್.ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷರಾದ ಡಿ.ಲೋಹಿತ್, ಕ್ಷೇತ್ರದ ಮಂಡಲ ಅಧ್ಯಕ್ಷರಾದ ಡಾ. ಭಾನುಪ್ರಕಾಶ್ , ಸ್ಥಳೀಯ ನಗರ ಪಾಲಿಕೆ ಸದಸ್ಯರಾದ , ಡಾ ಅಶ್ವಿನಿ ಶರತ್, ಮೈಸೂರು ನಗರ ಯುವಮೋರ್ಚಾ ಅಧ್ಯಕ್ಷರಾದ ಕಿರಣ್ ಗೌಡ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿ ಗೌಡ, ವೇಲು,ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ  ಭರತ್,ಸಂತೋಷ್,  ಕ್ಷೇತ್ರದ  ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ, ಮೈಸೂರು ನಗರ ಯುವ ಮೋರ್ಚಾ ಉಪಾಧ್ಯಕ್ಷರಾದ ಕಾರ್ತಿಕ್ ,ಮುಖಂಡರಾದ ಶರತ್, ಸೋಮು, ಪ್ರಮೋದ್,ಕೃಷ್ಣಮೂರ್ತಿ ರಾವತ್ ಡಾನ್,ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಅಂಥೋಣಿ ಪೌಲ್ , ರವಿ,ಮುಂತಾದವರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: