ಪ್ರಮುಖ ಸುದ್ದಿಮೈಸೂರು

ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭ-ಭೂಮಿಪೂಜೆ ಕಾರ್ಯಕ್ರಮಕ್ಕೆ ರಾಜಮಾತೆಗೆ ಆಹ್ವಾನ

ಮೈಸೂರು,ಜು.29:- ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭ ಮತ್ತು ವಿಸ್ತರಣೆ ಭೂಮಿಪೂಜೆ ಕಾರ್ಯಕ್ರಮಕ್ಕೆ ಮೈಸೂರು ರಾಜಮಾತೆ ಅವರನ್ನು ಮಾಜಿ ಸಚಿವ, ಉದ್ಯಮಿ ಮುರುಗೇಶ್ ಆರ್ ನಿರಾಣಿ ಆಹ್ವಾನಿಸಿದರು.

ಇಂದು ಮೈಸೂರು ಅರಮನೆಗೆ ಭೇಟಿ ನೀಡಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರನ್ನು ಆಹ್ವಾನಿಸಿದ ಅವರು ಆ.11ರಂದು ಪವಿತ್ರ ಶ್ರೀಕೃಷ್ಣ ಜನ್ಮಾಷ್ಠಮಿಯಂದು ಬೆಳಿಗ್ಗೆ 11ಗಂಟೆಗೆ ಕಾರ್ಖಾನೆಯ ಆವರಣದಲ್ಲಿ ಭೂಮಿಪೂಜೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ತಾವು ಸಹಕುಟುಂಬ ಸಮೇತರಾಗಿ ಉಪಸ್ಥಿತರಿದ್ದು ಶುಭ ಹಾರೈಸಿ ನಮಗೆಲ್ಲ ಮಾರ್ಗದರ್ಶನ ಮಾಡಬೇಕು ಎಂದರು.

ತಮ್ಮ ಹಾಗೂ ನಾಡಿನ ಹಿರಿಯ ಮಠಾಧೀಶರ ಶುಭಾಶೀರ್ವಾದದಿಂದ ನಿರಾಣಿ ಶುಗರ್ಸ್ ಲಿ.ಕಾರ್ಖಾನೆ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 40ವರ್ಷಗಳ ಅವಧಿಗೆ ಗುತ್ತಿಗೆ ಪಡೆದಿರುವುದು ಎಲ್ಲರಿಗೂ ತಿಳಿದಿದೆ. ಕಾರ್ಖಾನೆಯ ಪುನರಾರಂಭಕ್ಕೆ ತಯಾರಿ ಕೆಲಸಗಳು ಸಮರೋಪಾದಿಯಲ್ಲಿ ನಡೆದಿದ್ದು ಪ್ರಸಕ್ತ ಹಂಗಾಮಿನಿಂದಲೇ ಕಾರ್ಖಾನೆಯ ಕಬ್ಬು ನುರಿಸುವ ಕಾರ್ಯಾರಂಭ ಮಾಡಲಿದೆ ಎಂಬ ವಿಚಾರವನ್ನು ತಿಳಿಸಲು ಸಂತೋಷವೆನಿಸುತ್ತದೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: