ಮೈಸೂರು

ಬೀದಿ ಬದಿ ವ್ಯಾಪಾರಿಗಳಿಗೆ ಅಗತ್ಯ ವಸ್ತು ವಿತರಿಸುವ ಮೂಲಕ ಬಿ.ಕೆ.ಹರಿಪ್ರಸಾದ್ ಹುಟ್ಟುಹಬ್ಬ ಆಚರಣೆ

ಮೈಸೂರು,ಜು.29:- ಬಿ.ಕೆ ಹರಿಪ್ರಸಾದ್ ಅಭಿಮಾನಿಗಳ ಬಳಗದಿಂದ ಇಂದು ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ಅವರ ಹುಟ್ಟುಹಬ್ಬವನ್ನು ಕಾಂಗ್ರೆಸ್ ಕಚೇರಿಯ ಭಾಗದಲ್ಲಿ ಬೀದಿ ವ್ಯಾಪಾರಿಗಳಿಗೆ ಮಾಸ್ಕ್, ಸ್ಯಾನಿಟೈಜರ್, ಕೊಡೆಗಳನ್ನು ವಿತರಿಸುವ ಮೂಲಕ ಆಚರಿಸಲಾಯಿತು.

ಮೈಸೂರು ಪ್ರಚಾರ ಸಮಿತಿ ಅಧ್ಯಕ್ಷರಾದ ಡಾ.ಎಂ.ಕೆ.ಅಶೋಕ, ಕಾಂಗ್ರೆಸ್ ನ ರಾಜ್ಯ ಹಿಂದುಳಿದ ವರ್ಗಗಳ ಸಂಘಟನಾ ಕಾರ್ಯದರ್ಶಿ ಟಿ .ಶೇಖರ್, ಪ್ರಚಾರ ಸಮಿತಿಯ ಎನ್.ಆರ್ ಕ್ಷೇತ್ರದ ಅಧ್ಯಕ್ಷ ಪ್ರಶಾಂತ ಮುಖಂಡರುಗಳಾದ ಮಂಜು, ಎಸ್. ರವಿ ,ಮಾದೇವ ಹಲವರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: