ಪ್ರಮುಖ ಸುದ್ದಿ

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಮನವಿ

ರಾಜ್ಯ( ಮಡಿಕೇರಿ) ಜು.31 :- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರತಿವರ್ಷ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡುವ ಬಗ್ಗೆ ಸಾರ್ವಜನಿಕರಲ್ಲಿ, ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಹಲವಾರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಈ ವರ್ಷವೂ ಸಹ ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆ ಬಗ್ಗೆ ಜನಜಾಗೃತಿ ಮೂಡಿಸಲು ಉದ್ದೇಶಿಸಿದೆ.
ಕೋವಿಡ್ ಸೋಂಕು ಹಬ್ಬುತ್ತಿರುವ ಈ ದಿನಗಳಲ್ಲಿ ರೋಗ ನಿರೋಧಕ ಶಕ್ತಿಯುಳ್ಳ ಅರಿಶಿನ ಬಳಕೆಯಿಂದ ಗಣೇಶ ಪ್ರತಿಮೆಯನ್ನು ಮನೆಯಲ್ಲಿಯೇ ಮಾಡಿಕೊಂಡು ಪೂಜಿಸುವುದರಿಂದ ಸಾರ್ವಜನಿಕರು ಪರಿಸರಕ್ಕೆ ಅಪಾರ ಕೊಡುಗೆ ನೀಡಬಹುದಾಗಿದೆ. ಈ ಬಾರಿ ಸಗಣಿಯಿಂದ ಮಾಡಿದ ಅಥವಾ ಗೋಧಿ ಅಥವಾ ರಾಗಿ ಹಿಟ್ಟಿಗೆ ಅರಿಶಿನ ಸೇರಿಸಿ ಸಣ್ಣ ಸಣ್ಣ ಗಣೇಶನ ಪ್ರತಿಮೆ ತಯಾರಿಸಿ ಪೂಜಿಸುವ ಮೂಲಕ ಕೋವಿಡ್-19 ಎದುರಿಸಲು ಸಂಕಲ್ಪ ಮಾಡಬೇಕಾಗಿದೆ. ಇಂತಹ ಪುಟ್ಟ ಪುಟ್ಟ ಪ್ರತಿಮೆಗಳನ್ನು ತಯಾರಿಸಿ ಮನೆಯ ಆವರಣದಲ್ಲೇ ವಿಸರ್ಜನೆ ಮಾಡುವುದರಿಂದ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬಹುದು ಎಂದು ಪರಿಸರ ಅಧಿಕಾರಿ ಗಣೇಶನ್ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: