ಪ್ರಮುಖ ಸುದ್ದಿ

ಕೋವಿಡ್ ವಿರುದ್ಧದ ರಾಜ್ಯ ಸರ್ಕಾರದ ಹೋರಾಟಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಿ : ಸಚಿವ ಸುಧಾಕರ್

ರಾಜ್ಯ(ಬೆಂಗಳೂರು)ಜು.31:- ಕೋವಿಡ್ ವಿರುದ್ಧದ ರಾಜ್ಯ ಸರ್ಕಾರದ ಹೋರಾಟಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆಗೂ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಕೋವಿಡ್ ಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ಪರಿಶೀಲಿಸಲು ಸಚಿವರ ನೇತೃತ್ವದಲ್ಲಿ ನಡೆದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಕೊರೋನಾ ರೋಗಿಗಳು ದಾಖಲಾಗುತ್ತಿದ್ದಾರೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾತಿ ನಿರಾಕರಿಸುವುದು, ಹೆಚ್ಚು ಶುಲ್ಕ ವಿಧಿಸುವುದು ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕೆಪಿಎಂಇ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಯಾ ವಲಯದ ಜಂಟಿ ಆಯುಕ್ತರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಇದನ್ನು ಬಳಸಿಕೊಂಡು ಅಧಿಕಾರಿಗಳು ಕ್ರಮ ಜರುಗಿಸಬೇಕು. ಕ್ರಮ ಕೈಗೊಳ್ಳಲು ಪೊಲೀಸರ ಸಹಕಾರ ಪಡೆಯಬಹುದು. ಈ ಕುರಿತು ಮುಖ್ಯಮಂತ್ರಿಗಳ ಬಳಿಯೂ ಚರ್ಚೆ ಮಾಡುತ್ತೇನೆ ಎಂದು ಸಭೆಗೆ ತಿಳಿಸಿದರು.
ಸಚಿವರು ಬಿಬಿಎಂಪಿಯ ಪ್ರತಿ ವಲಯದ ಜಂಟಿ ಆಯುಕ್ತರೊಂದಿಗೆ ಮಾತನಾಡಿ, ಕೊರೋನಾ ಪತ್ತೆ ಪರೀಕ್ಷೆಯ ಬಗ್ಗೆ ಮಾಹಿತಿ ಪಡೆದರು. ಪ್ರತಿ ವಲಯದಲ್ಲಿ ಈಗ ನಡೆಯುತ್ತಿರುವ ಪರೀಕ್ಷೆ ಸಂಖ್ಯೆಯನ್ನು ಮೂರರಿಂದ ನಾಲ್ಕು ಪಟ್ಟು ಹೆಚ್ಚಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: