
ಮೈಸೂರು
ಬಿಎಸ್ ವೈ ಶೀಘ್ರ ಗುಣಮುಖರಾಗಲೆಂದು ಅಭಿಮಾನಿಗಳಿಂದ ಪ್ರಾರ್ಥನೆ
ಮೈಸೂರು,ಆ.3:- ಕೇಂದ್ರದ ಗೃಹ ಸಚಿವ ಅಮಿತ್ ಶಾ ಹಾಗೂ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಅಭಿಮಾನಿಗಳು ಶೀಘ್ರ ಗುಣಮುಖರಾಗಲೆಂದು ಇಂದು ಪೂಜೆ ಸಲ್ಲಿಸಿದರು.
ಬಿಎಸ್ ಯಡಿಯೂರಪ್ಪ ಅಭಿಮಾನಿ ಬಳಗದಿಂದ ಮೈಸೂರಿನ ಆಗ್ರಹಾರದಲ್ಲಿರುವ ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿದರು. ಅಮಿತ್ ಶಾ ಹಾಗೂ ಬಿಎಸ್ ಯಡಿಯೂರಪ್ಪನವರ ಫೋಟೋ ಹಿಡಿದು ಪೂಜೆ ಮಾಡಿಸಿದರು. ದೇಶ ಕೊರೋನಾ ಮುಕ್ತವಾಗಲೆಂದು ಪ್ರಾರ್ಥಿಸಿದರು. (ಕೆ.ಎಸ್,ಎಸ್.ಎಚ್)