ಮೈಸೂರು

ನಿರಂಜನ್ ಪರ ಮತಯಾಚಿಸಿದ ಯಡಿಯೂರಪ್ಪ

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನ್ನೇಗಾಲ ಗ್ರಾಮದಲ್ಲಿ ಗುರುವಾರ ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಪರ ಮತಯಾಚಿಸಿದರು.

ಹಿರೇಕೆರೂರು ಶಾಸಕ, ಯು ಬಿ ಬಣಕಾರ್ ಮತ್ತು ಸ್ಥಳೀಯ ಮುಖಂಡರೊಡನೆ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಯಡಿಯೂರಪ್ಪ  ಕ್ಷೇತ್ರದ ಉಪಚುನಾವಣೆಯಲ್ಲಿ ಈ ಬಾರಿ ಮತದಾರರು ಬದಲಾವಣೆ ಬಯಸಿದ್ದು ನಂಜನಗೂಡು, ಗುಂಡ್ಲುಪೇಟೆ ಎರಡೂ ಕ್ಷೇತ್ರದಲ್ಲಿ ಪ್ರಚಾರ ಸಮಯದಲ್ಲಿ ಜನಸಾಗರವೇ ಹರಿದು ಬರುತ್ತಿದೆ ಅಭ್ಯರ್ಥಿಗಳು ಗೆಲುವಿನ ಮುಂಚೂಣಿಯಲ್ಲಿದ್ದು ಕಾಂಗ್ರೆಸ್ ಪಕ್ಷವನ್ನು ಜನತೆ ತಿರಸ್ಕರಿಸಿದ್ದಾರೆ ತಾವುಗಳು ಮತ್ತೊಮ್ಮೆ ಯೋಚಿಸಿ ಬಿಜೆಪಿ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: