ಪ್ರಮುಖ ಸುದ್ದಿ

ಕೊಡಗಿನಲ್ಲಿ ಉತ್ತಮ ಮಳೆ

ರಾಜ್ಯ( ಮಡಿಕೇರಿ) ಆ.4 :- ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಿರು ತೊರೆಗಳು ಉಕ್ಕಿ ಹರಿಯುತ್ತಿದ್ದರೆ ಜೀವನದಿ ಕಾವೇರಿ, ಲಕ್ಷ್ಮಣತೀರ್ಥದಲ್ಲಿ ನೀರಿನ ಮಟ್ಟ ನಿಧಾನವಾಗಿ ಹೆಚ್ಚಳವಾಗುತ್ತಿದೆ.
ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ 24 ಗಂಟೆಗಳಲ್ಲಿ ಎರಡೂವರೆ ಇಂಚು ಮಳೆಯಾಗಿದೆ. ‘ತ್ರಿವೇಣಿ’ ಸಂಗಮದಲ್ಲಿ ನೀರಿನ ಮಟ್ಟ ಒಂದಷ್ಟು ಹೆಚ್ಚಿದೆ.
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳ ಅವಧಿಯಲ್ಲಿ ಎರಡೂವರೆ ಇಂಚು ಮಳೆಯಾಗಿದ್ದರೆ, ಭಾನುವಾರ ರಾತ್ರಿಯಿಂದ ಆರಂಭಗೊಂಡ ಗಾಳಿ ಮಳೆ ಸೋಮವಾರವೂ ಮುಂದುವರೆದಿದೆ. ಮೈಕೊರೆಯುವ ಚಳಿಯೂ ಇದೆ. ನಗರದ ರಸ್ತೆ ತುಂಬಾ ಗುಂಡಿಗಳಿರುವುದರಿಂದ ನೀರು ತುಂಬಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ.
ಮಡಿಕೇರಿ ಸಮೀಪದ ಗಾಳಿಬೀಡು ಗ್ರಾಮದ ಕಾಲೂರು ರಸ್ತೆಯಲ್ಲಿ ಮರವೊಂದು ವಿದ್ಯುತ್ ಕಂಬದ ಮೇಲೆ ಉರುಳಿ ಬಿದ್ದಿದ್ದು, ಈ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವೀರಾಜಪೇಟೆ, ಸೋಮವಾರಪೇಟೆ ವಿಭಾಗಗಳಲ್ಲು ಉತ್ತಮ ಮಳೆಯಾಗುತ್ತಿದೆ. ಆ.7 ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲಾಡಳಿತ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಎಚ್ಚರದಿಂದಿರುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಮಳೆ ವಿವರ 
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ ಮಳೆ 45.52 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 867.60 ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 836.72 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 52.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1317.87 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1153.15 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 46.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 764.42 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 850.36 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 520.52 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 506.64 ಮಿ.ಮೀ. ಮಳೆಯಾಗಿತ್ತು.
ಹೋಬಳಿವಾರು ಮಳೆ ವಿವರ-ಮಡಿಕೇರಿ 54.80, ನಾಪೋಕ್ಲು 43.20, ಸಂಪಾಜೆ 56.20, ಭಾಗಮಂಡಲ 55, ವಿರಾಜಪೇಟೆ 43.80, ಹುದಿಕೇರಿ 59, ಶ್ರೀಮಂಗಲ 68, ಪೊನ್ನಂಪೇಟೆ 40, ಅಮ್ಮತ್ತಿ 28, ಬಾಳೆಲೆ 38.40, ಸೋಮವಾರಪೇಟೆ 41, ಶನಿವಾರಸಂತೆ 54, ಶಾಂತಳ್ಳಿ 10.80, ಕೊಡ್ಲಿಪೇಟೆ 68.80, ಕುಶಾಲನಗರ 18.70, ಸುಂಟಿಕೊಪ್ಪ 35 ಮಿ.ಮೀ.ಮಳೆಯಾಗಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: