ಪ್ರಮುಖ ಸುದ್ದಿ

ಕೊರೋನಾ ಹೆಸರಲ್ಲಿ ರಾಜ್ಯ ಸರ್ಕಾರದಿಂದ ಭಾರೀ ಭ್ರಷ್ಟಾಚಾರ : ಮಾಜಿ ಸಚಿವ ಚಲುವರಾಯಸ್ವಾಮಿ ಆರೋಪ

ರಾಜ್ಯ( ಚಾಮರಾಜನಗರ)ಆ.4:- ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನ ವಿಚಾರದಲ್ಲಿ ಬಾರಿ ಭ್ರಷ್ಟಾಚಾರ ನಡೆಸಿ, ಕೊರೋನಾ ನಿಯಂತ್ರಿಸುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿವೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಚಲುವರಾಯಸ್ವಾಮಿ ಆರೋಪಿಸಿದರು.

ಕೊರೋನಾ ನಿಯಂತ್ರಣದ ಹೆಸರಲ್ಲಿ ರಾಜ್ಯ ಸರ್ಕಾರ 4167 ಕೋಟಿ ರೂ. ಖರ್ಚುಮಾಡಿರುವ ಮಾಹಿತಿ ಲಭ್ಯವಾಗಿದೆ. ಇಷ್ಟು ಪ್ರಮಾಣದ ಹಣವನ್ನು ಯಾರಿಗಾಗಿ ಖರ್ಚುಮಾಡಿದ್ದಾರೆ. ವಿರೋಧ ಪಕ್ಷದವರಾದ ನಾವು ಪ್ರಶ್ನಿಸಿದರೆ ಕೇವಲ ನೂರಾರು ಕೋಟಿಗಳ ಮಾತನಾಡುತ್ತಾರೆ. ಮತ್ತೊಂದು ಬಾರಿ 4167 ಕೋಟಿ ರೂ.ಖರ್ಚಾಗಿದೆ ಎಂದು ಹೇಳಿಕೊಳ್ಳುತ್ತಾರೆ. ಈ ಹಣವೆಲ್ಲ ಯಾರಿಗಾಗಿ ಖರ್ಚುಮಾಡಿದ್ದಾರೆ ಎಂದು ಅವರು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಷ್ಟ್ರ ಮತ್ತು ರಾಜ್ಯದಲ್ಲಿ ಜನವರಿ, ಫೆಬ್ರವರಿ ತಿಂಗಳಲ್ಲಿಯೇ ಕೊರೋನಾ ಕಾಣಿಸಿಕೊಂಡ ಕೂಡಲೇ ಅದನ್ನು ನಿಯಂತ್ರಿಸುವ ಅಕಾಶವಿತ್ತು. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಿಲ್ಲ. ಆರಂಭದಲ್ಲೇ ಹೊರ ರಾಷ್ಟ್ರ ಮತ್ತು ಹೊರ ರಾಜ್ಯಗಳಿಂದ ಬರುವವರಿಗೆ ನಿಯಂತ್ರಣವನ್ನೂ ಏರಲಿಲ್ಲ. ಪರಿಣಾಮ ಇಂದು ರಾಷ್ಟ್ರ ಮತ್ತು ರಾಜ್ಯದಲ್ಲಿ ಕೊರೋನಾ ಆರ್ಭಟಿಸುತ್ತಿದೆ ಎಂದು ತಿಳಿಸಿದ ಅವರು, ಕೊರೋನಾ ಸಮಯದಲ್ಲಿ ರಾಜ್ಯ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಿಲ್ಲ. ರೈತರು ಬೆಳೆ ನಾಶ ಅನುಭವಿಸುವುದರ ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ನಷ್ಟ ಅನುಭವಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರ ಕೈ ಹಿಡಿಯಲಿಲ್ಲ ಎಂದು ಅವರು ಆರೋಪಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: