ಪ್ರಮುಖ ಸುದ್ದಿಮೈಸೂರು

ಮಾಜಿ ಸಿಎಂ ಸಿದ್ದರಾಮಯ್ಯನವರಿಗೂ ವಕ್ಕರಿಸಿದ   ಕೊರೋನಾ ಸೋಂಕು

ಬೆಂಗಳೂರು/ಮೈಸೂರು,ಆ.4:- ಮಾಜಿ ಸಿಎಂ ಸಿದ್ದರಾಮಯ್ಯನವರಿಗೂ  ಕೊರೋನಾ ಸೋಂಕು ವಕ್ಕರಿಸಿದೆ. ಸೋಂಕು ತಗಲಿರುವ ಬಗ್ಗೆ ಸ್ವತಃ ಟ್ವೀಟರ್ ನಲ್ಲಿ ಸ್ವತಃ ಅವರೇ ಸ್ಪಷ್ಟಪಡಿಸಿದ್ದಾರೆ.

ನಿನ್ನೆ ಬೆಳಿಗ್ಗೆಯಿಂದ ಜ್ವರ ಕಾಣಿಸಿಕೊಂಡಿತ್ತು. ಟೆಸ್ಟ್ ಮಾಡಿಸಿದಾಗ ಕೊರೋನಾ ದೃಢಪಟ್ಟಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: