ಕರ್ನಾಟಕಪ್ರಮುಖ ಸುದ್ದಿ

ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು,ಆ.4-ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇವರಿಬ್ಬರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಬ್ಬರು ರಾಜಕೀಯ ನಾಯಕರು ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಅವರ ಆರೋಗ್ಯದ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನಿಗಾ ವಹಿಸುತ್ತಿದ್ದಾರೆ. ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಬೆನ್ನಲ್ಲೇ ವಿಪಕ್ಷ ನಾಯಕರು, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯನವರಿಗೆ ಕೊರೊನಾ ಪಾಸಿಟಿವ್ ಬಂದಿರುವುದು ತಿಳಿದು ಬಂದಿದೆ. ರಾಜ್ಯ ಕಂಡ ಆದರ್ಶ ರಾಜಕಾರಣಿ ಅವರು. ಅವರಿಗೆ ಪಾಸಿಟಿವ್ ಕಂಡು ಬಂದಿರುವುದು ನನಗೆ ನೋವಾಗಿದೆ. ಆದಷ್ಟು ಬೇಗನೆ ಅವರು ಚೇತರಿಸಿಕೊಂಡು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಆರೋಗ್ಯದಲ್ಲಿ ಸ್ಥಿರವಾಗಿದೆ. ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ. ಸಿಎಂ ಬಿಎಸ್‌ವೈ ಮತ್ತು ಮಾಜಿ ಸಿಎಂ ಬೇಗ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಕಳೆದ ಭಾನುವಾರ ರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ನಿನ್ನೆ ರಾತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೂತ್ರನಾಳದ ಸಮಸ್ಯೆಯಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೂ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. (ಎಂ.ಎನ್)

Leave a Reply

comments

Related Articles

error: