ಪ್ರಮುಖ ಸುದ್ದಿಮೈಸೂರು

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗೂ ವಕ್ಕರಿಸಿದ ಕೊರೋನಾ : ಶೀಘ್ರಗುಣಮುಖರಾಗಲು ಶುಭ ಹಾರೈಸಿದ ಜಿ.ಟಿ.ದೇವೇಗೌಡ

ಮೈಸೂರು,ಆ.5:- ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ  ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅವರಿಗೂ ಕೂಡ ಕೊರೋನಾ ವಕ್ಕರಿಸಿದೆ ಎನ್ನಲಾಗಿದೆ.

ಈ ಕುರಿತು ಶಾಸಕ ಜಿ.ಟಿ.ದೇವೇಗೌಡ ಅವರು ಟ್ವೀಟರ್ ನಲ್ಲಿ ಬರೆದುಕೊಂಡಿದ್ದು,  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವ  ವಿಷದು ತಿಳಿದು ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಅವರು ಶೀಘ್ರ ಗುಣಮುಖರಾಗಿ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುವುದಾಗಿ ಬರೆದುಕೊಂಡಿದ್ದಾರೆ.

ಸೋಮಶೇಖರ್ ಅವರ   ಆಪ್ತ ಸಹಾಯಕನಿಗೆ  ಜು.28ರಂದು ಕೊರೋನಾ ಪಾಸಿಟಿವ್‌ ದೃಢಪಟ್ಟಿತ್ತು.  ಸಚಿವರನ್ನು ಒಂದು ವಾರಗಳ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಅಲ್ಲದೆ, ಅವರ ಕಚೇರಿಯನ್ನು ಸೀಲ್‌ಡೌನ್ ಮಾಡಲಾಗಿತ್ತು.  7 ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಕೂಡ ವಿಧಿಸಲಾಗಿತ್ತು.

ಸಹಕಾರ ಸಚಿವರ ನೆಲ ಮಹಡಿ ಕೊಠಡಿ ಸಂಖ್ಯೆ 38-39 ರಲ್ಲಿ ಆಪ್ತ ಸಿಬ್ಬಂದಿಯೊಬ್ಬರಿಗೆ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೋಂಕ್ವಾರಂಟೇನ್ ಗೆ ಒಳಗಾಗಲಿದ್ದಾರೆ. ಅಲ್ಲದೆ ಇಂದಿನಿಂದ 7 ದಿನಗಳ ಕಾಲ ಸಾರ್ವಜನಿಕ ಪ್ರವೇಶವನ್ನು ಸಹ ನಿರ್ಬಂಧಿಸಲಾಗಿದೆ” ಎಂದು ಸಚಿವಾಲಯದಿಂದ ಪ್ರಕಟಣೆ ಕೂಡ ಹೊರಡಿಸಲಾಗಿತ್ತು. ಇದೀಗ ಸಚಿವರಿಗೆ ಕೂಡ ಸೋಂಕು ದೃಢಪಟ್ಟಿದ್ದು ಅವರು ಹೋ ಐಸೋಲೇಶನ್ ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆಂದು ಬಲ್ಲ ಮೂಲಗಳಿಂದ ಮಾಹಿತಿ ಲಭಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: